More

    ಅಕಾಲಿಕ ಮಳೆಗೆ ನೆಲಕಚ್ಚಿದ ಬೆಳೆ

    ಗದಗ: ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿದ ಅಕಾಲಿಕ ಮಳೆ ಹಿಂಗಾರಿ ಬೆಳೆಗಳ ಮೇಲೆ ಗಂಭೀರ ಪರಿಣಾಮ ಬೀರತೊಡಗಿದೆ. ಉತ್ತಮ ಬೆಳೆ ನಿರೀಕ್ಷಿಸಿದ್ದ ರೈತರನ್ನು ಮಳೆ ಸಂಕಷ್ಟಕ್ಕೆ ದೂಡಿದೆ. ಶುಕ್ರವಾರ ಮತ್ತು ಶನಿವಾರ ಬೆಳಗಿನ ಜಾವ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿದೆ. ದಿನವಿಡೀ ಮೋಡ ಕವಿದ ವಾತಾವರಣ ಮತ್ತು ತಂಪು ಗಾಳಿ ಬೀಸಿದೆ. ರೋಣ, ಲಕ್ಷೆ್ಮೕಶ್ವರ, ಶಿರಹಟ್ಟಿ ಮತ್ತು ಮುಂಡರಗಿ ತಾಲೂಕುಗಳಲ್ಲಿ ಹೆಚ್ಚು ಮಳೆ ಸುರಿದಿದ್ದರಿಂದ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಕಾಲಿಕ ಮಳೆಯಿಂದ ಮೆಣಸಿನಕಾಯಿ, ಹತ್ತಿ, ಕಡಲೆ, ಕುಸುಬೆ, ಸೂರ್ಯಕಾಂತಿ ಮತ್ತು ಗೋಧಿ ಬೆಳೆಗಳಿಗೆ ರೋಗ ಹೆಚ್ಚಾಗುವ ಸಾಧ್ಯತೆಗಳಿವೆ.

    ಜಿಲ್ಲೆಯಲ್ಲಿ ಕಳೆದ ಎರಡು ದಿನ ಸುರಿದ ಅಕಾಲಿಕ ಮಳೆಗೆ ಜೋಳ ಮತ್ತು ಮೆಕ್ಕೆಜೋಳಕ್ಕೆ ಹೆಚ್ಚು ಹಾನಿ ಉಂಟಾಗಿದೆ. ಈ ಕುರಿತು ತಾಲೂಕು ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಒಟ್ಟು ಹಾನಿಯ ಒಟ್ಟು ಮಾಹಿತಿ ಸೋಮವಾರ ಲಭ್ಯವಾಗಲಿದೆ.

    | ರುದ್ರೇಶಪ್ಪ ಟಿ.ಎಸ್., ಜಂಟಿ ಕೃಷಿ ನಿರ್ದೇಶಕ, ಗದಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts