More

    ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭ

    ಲಕ್ಷ್ಮೇಶ್ವರ: ಹಿಂಗಾರು ಹಂಗಾಮಿನ ಬೆಳೆಯ ವಿವರವನ್ನು ಮೊಬೈಲ್ ಆ್ಯಪ್‌ನಲ್ಲಿ ದಾಖಲಿಸುವ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ರೈತರು ಖುದ್ದಾಗಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಬೇಕು ಎಂದು ಕೃಷಿ ಅಧಿಕಾರಿ ಚಂದ್ರಶೇಖರ ನರಸಮ್ಮನವರ ತಿಳಿಸಿದ್ದಾರೆ.

    ಶುಕ್ರವಾರ ತಾಲೂಕಿನ ಬಸಾಪುರ ಗ್ರಾಮದ ಜಮೀನಿನನಲ್ಲಿ ರೈತರಿಗೆ ಪ್ರಾತ್ಯಕ್ಷಿತೆ ನೀಡಿ ಮಾತನಾಡಿದ ಅವರು, ಬೆಳೆಗಳ ನಿಖರ ಮಾಹಿತಿ ಪಡೆದುಕೊಳ್ಳಲು ಅಭಿವೃದ್ಧಿಪಡಿಸಿರುವ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ಆರಂಭವಾಗಿದೆ. ರೈತರು ಗೂಗಲ್ ಪ್ಲೇಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಸಮೀಕ್ಷೆ ವೇಳೆ ಆಧಾರ್ ಕಾರ್ಡ್ ಇರಬೇಕು ಎಂದು ತಿಳಿಸಿದ್ದಾರೆ. ಬೆಳೆಹಾನಿ ವರದಿ ಸಿದ್ಧ್ದಪಡಿಸಲು, ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಿಸಲು, ಬೆಳೆ ಸಾಲ ಮಂಜೂರು ಮಾಡಲು ಈ ಮಾಹಿತಿ ಅವಶ್ಯವಾಗಿದೆ. ರೈತರು ಹೆಚ್ಚಿನ ಮಾಹಿತಿಗೆ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು. ರೈತರಾದ ಯಲ್ಲಪ್ಪ ಬೇವಿನಮರದ, ನಾಗಪ್ಪ ಕಡೇಮನಿ, ಮಹಾಂತೇಶ ಉಮಚಗಿ, ನೀಲಪ್ಪ ಬೇವಿನಮರದ (ಪಿಆರ್), ಮಹೇಶ ನಂದೆಣ್ಣವರ, ಗ್ರಾಮ ಸಹಾಯಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts