More

    ವರ್ಕೌಟ್​ ಆದ 50% ಆಫರ್​: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್​ ಫೈನ್​ ಸಂಗ್ರಹ; ಒಟ್ಟು ಮೊತ್ತವೆಷ್ಟು?

    ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಐಡಿಯಾ ವರ್ಕೌಟ್ ಆಗಿದ್ದು, ಮೂರನೇ ದಿನವೂ ಕೋಟಿಗಟ್ಟಲೆ ರೂ. ದಂಡ ಸಂಗ್ರಹವಾಗಿದೆ.

    ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ 5,61,45,000 ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನವಾದ ಇಂದು ಕೂಡ ಭರ್ಜರಿ ದಂಡ ಪಾವತಿಯಾಗಿದ್ದು, 6,31,77,750 ರೂ. ಸಂಗ್ರಹಗೊಂಡಿದೆ. ಇಂದು ರಾತ್ರಿ 8.30ರ ವರೆಗಿನ ಅಂಕಿ-ಅಂಶದ ಪ್ರಕಾರ ಈ ಮೂರು ದಿನಗಳಲ್ಲಿ ಒಟ್ಟು 7,41,048 ಕೇಸ್​ ಇತ್ಯರ್ಥಗೊಂಡಿದ್ದು, 22,32,47,750 ರೂ. ದಂಡ ಪಾವತಿಸಲ್ಪಟ್ಟಿದೆ.

    ಇಂದು ಸಂಗ್ರಹವಾದ ದಂಡದ ವಿವರ

    ವರ್ಕೌಟ್​ ಆದ 50% ಆಫರ್​: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್​ ಫೈನ್​ ಸಂಗ್ರಹ; ಒಟ್ಟು ಮೊತ್ತವೆಷ್ಟು?

    ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು.

    ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

    ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ.

    ಟ್ರಾಫಿಕ್​ ದಂಡದಲ್ಲಿ 50% ರಿಯಾಯಿತಿ! ಪಾವತಿಸುವ ವಿಧಾನ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ…

    ಎಟಿಎಮ್​ನಿಂದ ವಿಚಿತ್ರ ರೀತಿಯಲ್ಲಿ ಕಳವಾದ ಹಣ; ಬ್ಯಾಂಕ್​ನವರಿಗೆ ತಲೆನೋವಾಗಿರುವ ಖದೀಮರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts