More

    ಲೋಕಸಭೆ ಚುನಾವಣೆ: ಅಬ್ ಕೀ ಬಾರ್, 400 ಪಾರ್ ಹೇಳಿಕೆಗೆ ಮಮತಾ ಬ್ಯಾನರ್ಜಿ ತಿರುಗೇಟು

    ಕೃಷ್ಣಾನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಭಾನುವಾರ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು.

    ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 7 ತಿಂಗಳ ಮಗು ಸೇರಿ ನಾಲ್ವರು ಸಜೀವ ದಹನ

    ಪಶ್ಚಿಮ ಬಂಗಾಳದ ಕೃಷ್ಣಾನಗರದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಜೆಪಿ 200 ಕ್ಷೇತ್ರಗಳಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

    400 ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿಯವರು ಹೇಳಿಕೊಳ್ಳುತ್ತಿದ್ದಾರೆ. 200 ಸ್ಥಾನಗಳನ್ನು ದಾಟಿ ನೋಡಿ. ಕಳೆದ 2021ರ ವಿಧಾನಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 200 ಕ್ಷೇತ್ರಗಳನ್ನು ಗೆಲ್ಲುವುದಾಗಿ ಹೇಳಿದ್ದರು, 77 ಕ್ಕೇ ನಿಂತು ಹೋದರು ಎಂದು ಲೇವಡಿ ಮಾಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲು ತಾನು ಅನುಮತಿಸುವುದಿಲ್ಲ. ಸಿಎಎಗೆ ಅರ್ಜಿ ಸಲ್ಲಿಸುವುದರಿಂದ ಅರ್ಜಿದಾರರನ್ನು ವಿದೇಶಿಯನ್ನಾಗಿ ಪರಿವರ್ತಿಸುತ್ತದೆ ಎಂದು ಅವರು, ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸಬೇಡಿ ಎಂದು ಹೇಳಿದರು.

    ಪಶ್ಚಿಮ ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟದ ಜೊತೆ ಮೈತ್ರಿ ಇಲ್ಲ. ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬಂಗಾಳದಲ್ಲಿ ಬಿಜೆಪಿಗಾಗಿ ಕೆಲಸ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕೆ ಸಂಸದ ಮಹುವಾ ಮೊಯಿತ್ರಾ ಅವರನ್ನು ನಿಂದಿಸಿ ಲೋಕಸಭೆಯಿಂದ ಹೊರಹಾಕಲಾಯಿತು ಎಂದು ಅವರು ಟೀಕಿಸಿದರು.

    ಅಶ್ಲೀಲ ವಿಡಿಯೋ ಚಿತ್ರೀಕರಣ ವೇಳೆ ದಾಳಿ: ಕೇಸ್​ ಬೆನ್ನತ್ತಿದ ಪೊಲೀಸರಿಗೆ ಭಾರೀ ಶಾಕ್​, ಸೆ…ಸಿಡಿಗಳು ವಶಕ್ಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts