More

  ಶೃಂಗೇರಿಯಲ್ಲಿ ಪ್ರವಾಸಿಗರ ದಂಡು

  ಶೃಂಗೇರಿ: ಶಾರದಾಂಬೆ ಪೀಠ ಸೋಮವಾರ ಪ್ರವಾಸಿಗರಿಂದ ತುಂಬಿ ತುಳುಕುತಿತ್ತು. ಜೂನ್ ತಿಂಗಳಲ್ಲಿ ಶಾಲೆ ಪ್ರಾರಂಭಗೊಳ್ಳುವ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು, ಶಿವಮೊಗ್ಗ, ಉಡುಪಿ, ಮಂಗಳೂರು ಸೇರಿದಂತೆ ತಮಿಳುನಾಡು, ತೆಲಂಗಾಣ ಭಾಗಗಳಿಂದ ಪಾಲಕರು ಮಕ್ಕಳ ಅಕ್ಷರಾಭ್ಯಾಸಕ್ಕಾಗಿ ಪ್ರವಚನ ಮಂದಿರದಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.

  ಶ್ರೀ ಶಾರದಾಂಬೆ, ಶ್ರೀ ಶಂಕರಾಚಾರ್ಯ, ಶ್ರೀ ತೋರಣ ಗಣಪತಿ, ಶ್ರೀ ವಿದ್ಯಾಶಂಕರ, ಶ್ರೀ ಮಲಹಾನಿಕರೇಶ್ವರ ದೇವಾಲಯಗಳಲ್ಲಿ ಭಕ್ತರು ವಿಶೇಷಪೂಜೆ ಸಲ್ಲಿಸಿದರು. ನರಸಿಂಹವನದ ಗುರುನಿವಾಸದಲ್ಲಿ ಜಗದ್ಗುರುಗಳ ದರ್ಶನದ ಬಳಿಕ ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು. ತಾಯಿ ಶ್ರೀ ಶಾರದಾಂಬೆ ಸನ್ನಿಧಿಗೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ವರ್ಷ ಅಂದಾಜು 40 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಶ್ರೀಮಠಕ್ಕೆ ಭೇಟಿ ನೀಡಿದ್ದಾರೆ.

  See also  ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts