

ಪಾಕಿಸ್ತಾನ ಗುಪ್ತಚರ ಅಧಿಕಾರಿಗಳ ಜತೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸಿಆರ್ಪಿಎಪ್ ಸಿಬ್ಬಂದಿಯನ್ನು ದೆಹಲಿಯಲ್ಲಿ ಬಂಧಿಸಲಾಗಿದೆ.
ಮೋತಿ ರಾಮ್ ಜಾಟ್ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು ಮತ್ತು 2023 ರಿಂದ ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಿದೆ.
''ಆರೋಪಿ ಮೋತಿ ರಾಮ್ ಜಾಟ್ ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮತ್ತು 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (PIOs) ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅವರು ವಿವಿಧ ಮಾರ್ಗಗಳ ಮೂಲಕ PIO ಗಳಿಂದ ಹಣವನ್ನು ಪಡೆಯುತ್ತಿದ್ದಾರೆ ಎಂದು ಸಂಸ್ಥೆಯು ಕಂಡುಹಿಡಿದಿದೆ" ಎಂದು ಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
"ದೆಹಲಿಯಿಂದ ಮೋತಿ ರಾಮ್‌ನನ್ನು ಬಂಧಿಸಿದ ಎನ್‌ಐಎ, ಆರೋಪಿಯ ವಿಚಾರಣೆ ಮುಂದುವರೆದಿದೆ, ಪಟಿಯಾಲ ಹೌಸ್ ನ್ಯಾಯಾಲಯದ ವಿಶೇಷ ನ್ಯಾಯಾಲಯವು ಜೂನ್ 6 ರವರೆಗೆ ಏಜೆನ್ಸಿಯ ಕಸ್ಟಡಿಗೆ ನೀಡಲಾಗಿದೆ" ಎಂದು ಅದು ಹೇಳಿದೆ.(ಏಜೆನ್ಸೀಸ್)