ಕ್ರೂಸರ್ ಅಪಘಾತ ಪ್ರಕರಣ; ಸತ್ತವರ ಸಂಖ್ಯೆ 10ಕ್ಕೆ ಏರಿಕೆ..

Accident
Published on

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ ಇದೀಗ ಹತ್ತಕ್ಕೆ ತಲುಪಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬರು ಇಂದು ಕೊನೆಯುಸಿರೆಳೆದರು.

ಗಾಯಾಳು ಮುತ್ತು ಮರಿಗೌಡ್ರ (16) ಸಾವಿಗೀಡಾದ ಯುವಕ. ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೂರು ದಿನಗಳ ಹಿಂದೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿತ್ತು. ದಿಬ್ಬಣ ಹೊರಟಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಬಳಿಕ ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಭಾನುವಾರ ಮತ್ತೊಬ್ಬರು ಸಾವಿಗೀಡಾಗಿದ್ದು, ಇಂದು ಮಗದೊಬ್ಬರ ಸಾವಿನಿಂದ ಸತ್ತವರ ಸಂಖ್ಯೆ ಹತ್ತಕ್ಕೆ ತಲುಪಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net