More

    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವರೇ ಎಬಿಡಿ? ಸ್ಪಷ್ಟ ಮಾಹಿತಿ ಕೊಟ್ಟ ಸಿಎಸ್‌ಎ

    ಜೊಹಾನ್ಸ್‌ಬರ್ಗ್: ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಪರ ಅತ್ಯುತ್ತಮ ಬ್ಯಾಟಿಂಗ್ ನಿರ್ವಹಣೆ ತೋರುತ್ತಿರುವ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್‌, ಅವರನ್ನು ಮತ್ತೊಮ್ಮೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲೂ ಕಾಣುವ ಹಂಬಲ ಅಭಿಮಾನಿಗಳದ್ದು. ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಎಬಿಡಿ ದಕ್ಷಿಣ ಆಫ್ರಿಕಾ ಪರ ಮರಳಿ ಕಣಕ್ಕಿಳಿಯಬಹುದು ಎಂಬ ನಿರೀಕ್ಷೆಯೂ ಮೂಡಿತ್ತು. ಅದಕ್ಕೆಲ್ಲ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ (ಸಿಎಸ್‌ಎ) ಇದೀಗ ಸ್ಪಷ್ಟವಾದ ಮಾಹಿತಿ ನೀಡಿದೆ.

    ಅನುಭವಿ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್‌ ಮುಂಬರುವ ಟಿ20 ವಿಶ್ವಕಪ್‌ಗೆ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ಸಾಧ್ಯತೆಯನ್ನು ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ತಳ್ಳಿಹಾಕಿದೆ. ಅಂತಾರಾಷ್ಟ್ರೀಯ ನಿವೃತ್ತಿ ಹೊಂದುವ ಅವರ ನಿರ್ಧಾರ ಬದಲಾಗುವ ಸಾಧ್ಯತೆ ಇಲ್ಲ. ಅವರ ನಿರ್ಧಾರ ಅಂತಿಮವಾಗಿದೆ ಎಂದು ಸಿಎಸ್‌ಎ ಮಂಗಳವಾರ ತಿಳಿಸಿದೆ.

    ಇದನ್ನೂ ಓದಿ: ಆ ಪಂದ್ಯದ ಬಳಿಕ ನನಗೆ ಮತ್ತು ಪತ್ನಿಗೆ ಜೀವ ಬೆದರಿಕೆ ಬಂದಿತ್ತು ಎಂದ ಫಾಫ್​ ಡು ಪ್ಲೆಸಿಸ್!

    ವೆಸ್ಟ್ ಇಂಡೀಸ್ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಸಿಎಸ್‌ಎ ಈ ವಿಷಯವನ್ನು ಸ್ಪಷ್ಟಪಡಿಸಿದೆ. 114 ಟೆಸ್ಟ್, 228 ಏಕದಿನ ಮತ್ತು 78 ಟಿ20 ಪಂದ್ಯ ಆಡಿದ ಬಳಿಕ ಎಬಿಡಿ 2018ರ ಮೇನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 37 ವರ್ಷದ ಅವರು ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಭಾಗವಾಗಿದ್ದು, ಟಿ20 ವಿಶ್ವಕಪ್ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲೇ ನಿಗದಿಯಾಗಿದೆ.

    ಈ ಮುನ್ನ 2019ರ ಏಕದಿನ ವಿಶ್ವಕಪ್ ಸಮಯದಲ್ಲೂ ಎಬಿ ಡಿವಿಲಿಯರ್ಸ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ನಿರೀಕ್ಷೆ ಮೂಡಿತ್ತು. ಆದರೆ ಆಗ ಟೀಮ್ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆಗಾರರು ಇದಕ್ಕೆ ಒಪ್ಪಿರಲಿಲ್ಲ. ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸುತ್ತಿನಲ್ಲೇ ಹೊರಬಿದ್ದ ಬಳಿಕ ತಂಡಕ್ಕೆ ಎಬಿಡಿ ಅವರಂಥ ಆಟಗಾರರ ಅನಿವಾರ‌್ಯತೆ ಕಾಣಿಸಿತ್ತು. ದಕ್ಷಿಣ ಆಫ್ರಿಕಾ ತಂಡದ ಕೋಚ್ ಮಾರ್ಕ್ ಬೌಷರ್ ಜತೆಗೆ ಎಬಿಡಿ ಇತ್ತೀಚೆಗೆ ಚರ್ಚೆ ನಡೆಸಿದಾಗ ಅವರು ಮರಳಿ ಬರುವ ಬಗ್ಗೆ ಮತ್ತೊಮ್ಮೆ ಕುತೂಹಲ ಮೂಡಿತ್ತು.

    VIDEO | ಕ್ರಿಕೆಟಿಗ ರಾಬಿನ್ ಉತ್ತಪ್ಪ ಡಾನ್ಸ್ ವಿಡಿಯೋ ವೈರಲ್

    ಕನ್ನಡತಿ ವೇದಾ ಬಳಿಕ ಮತ್ತೋರ್ವ ಮಹಿಳಾ ಕ್ರಿಕೆಟರ್ ತಾಯಿ ಕರೊನಾಗೆ ಬಲಿ

    ಆರ್​ಸಿಬಿ, ವಿರಾಟ್​ ಕೊಹ್ಲಿ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಚಸ್ಮಾ ಸುಂದರಿ ರಶ್ಮಿಕಾ ಮಂದಣ್ಣ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts