More

    CSK VS KKR: ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

    ಚೆನ್ನೈ: ಇಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 22ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

    ಇದನ್ನೂ ಓದಿ: ಅಶ್ವಿನಿ ಪುನೀತ್​​ರಾಜ್​ಕುಮಾರ್​ ಬೆಂಬಲಕ್ಕೆ ನಿಂತ ನಟ ಜಗ್ಗೇಶ್; ನೇರವಾಗಿ ಇವರ ವಿರುದ್ಧ ಆಕ್ರೋಶ 

    ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸತತ ಎರಡು ಸೋಲಿನ ಬಳಿಕ ಋತರಾಜ್​ ಗಾಯಕವಾಡ ನೇತೃತ್ವದ ಚೆನ್ನೈ ತಂಡ ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸುತ್ತಿದ್ದು, ಇದುವರೆಗೆ ಸೋಲನುಭವಿಸದ ಕೆಕೆಆರ್ ಆವೇಗವನ್ನು ಕಾಯ್ದುಕೊಳ್ಳಲು ಹವಣಿಸುತ್ತಿದೆ.

    ಸಿಎಸ್​ಕೆ ತಂಡ ಆಡಿದ 4 ಪಂದ್ಯಗಳಲ್ಲಿ 2 ಗೆಲುವು ಹಾಗೂ 2 ಸೋಲು ಕಂಡಿದೆ. ಐಪಿಎಲ್ 2024ರ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಇಳಿದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿದ 3 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ ಐಪಿಎಲ್ 2024ರ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ.

    ಕೆಕೆಆರ್ ಫ್ಲೇಯಿಂಗ್ 11 : ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಆಂಗ್‌ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಿಂಕು ಸಿಂಗ್, ವರುಣ್ ಚಕ್ರವರ್ತಿ.

    ಸಿಎಸ್​ಕೆ ಫ್ಲೇಯಿಂಗ್​ 11 : ರುತುರಾಜ್ ಗಾಯಕ್ವಾಡ್(ನಾಯಕ), ಎಂಎಸ್ ಧೋನಿ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಅಜಿಂಕ್ಯ ರಹಾನೆ, ಡೆರಿಲ್ ಮಿಚೆಲ್, ಸಮೀರ್ ರಿಜ್ವಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

    ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts