ರಚಿನ್​, ‘ನೂರ್​’ ಕಮಾಲ್​, ಧೋನಿ ಮಿಂಚಿನ ವೇಗ; ಮುಂಬೈ ಪಡೆಗೆ ಸೋಲಿನ ರುಚಿ ತೋರಿಸಿದ ಸಿಎಸ್​ಕೆ

blank

IPL 2025: ಇಂದು (ಮಾ.23) ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 18ನೇ ಆವೃತ್ತಿಯ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿ ಗೆಲುವಿಗಾಗಿ ಭರ್ಜರಿ ಪೈಪೋಟಿ ನೀಡಿತು. ರೋಚಕತೆಗೆ ತಿರುಗಿದ ಪಂದ್ಯದಲ್ಲಿ ಅಂತಿಮವಾಗಿ ಸಿಎಸ್​ಕೆ ತನ್ನ ಮೊದಲ ಗೆಲುವಿನ ಖಾತೆಯನ್ನು ತೆರೆಯಿತು.

ಟಾಸ್​ ಗೆದ್ದ ಸಿಎಸ್​ಕೆ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದು, ಸೂರ್ಯಕುಮಾರ್ ಯಾದವ್ ಪಡೆಗೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್​ನ ಸ್ಟಾರ್ ಬ್ಯಾಟರ್​ಗಳು ಹೆಚ್ಚು ಕಾಲ ಕ್ರೀಸ್​ನಲ್ಲಿ ನಿಂತು ಅಬ್ಬರಿಸುವಲ್ಲಿ ಮುಗ್ಗರಿಸಿದರು. 20 ಓವರ್​ ಅಂತ್ಯಕ್ಕೆ ಎಂಐ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿತು. ಈ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಸಿಎಸ್​ಕೆ, ಆರಂಭದಲ್ಲಿ ಉತ್ತಮ ರನ್​ ಕಲೆಹಾಕಿದ್ದೇ ಆದರೂ ಮಧ್ಯಂತರದಲ್ಲಿ ಪರದಾಡಿತು.

ಕಡೆಯ ಓವರ್​ವರೆಗೂ ತಲುಪಿದ ಸಿಎಸ್​ಕೆ-ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ರೋಚಕ ಹಂತಕ್ಕೆ ತಲುಪಿ, ಸಿಎಸ್​ಕೆ ಗೆಲುವಿನ ಮೂಲಕ ಮುಕ್ತಾಯಗೊಂಡಿತು. 4 ವಿಕೆಟ್​ಗಳ ಅಂತರದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ ಗೆದ್ದು ಬೀಗಿತು.

Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…