20 ಆಸ್ಪತ್ರೆಗಳಲ್ಲಿ ಸಿಟಿ, ಎಂಆರ್‌ಐ ಸ್ಕಾೃನ್ ಅಳವಡಿಕೆ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಸಿಟಿ ಸ್ಕಾೃನ್ ಮತ್ತು ಎಂಆರ್‌ಐ ಸೇವೆಗಳನ್ನು ಎಲ್ಲ ಲಾನುಭವಿಗಳಿಗೆ ಉಚಿತವಾಗಿ ಒದಗಿಸುವ ದೃಷ್ಟಿಯಿಂದ ಸರ್ಕಾರ 15 ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕಾೃನ್ ಹಾಗೂ 5 ಜಿಲ್ಲಾ ಆಸ್ಪತ್ರೆಗಳಲ್ಲಿ ಸಿಟಿ ಸ್ಕಾೃನ್ ಸೇವೆಗಳನ್ನು ಹೆಚ್ಚುವರಿಯಾಗಿ ಒದಗಿಸಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.
ರೋಗ ಪತ್ತೆ ಪರೀಕ್ಷೆಗಾಗಿ ಲಾನುಭವಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಮಾಡುತ್ತಿದ್ದ ವೆಚ್ಚ ಕಡಿಮೆ ಮಾಡಲು ಇದರಿಂದ ಅನುಕೂಲವಾಗಲಿದೆ.

ಸಿ.ಟಿ.ಸ್ಕಾೃನ್ ಎಲ್ಲೆಲ್ಲಿ?:
ಸರ್ಕಾರಿ-ಖಾಸಗಿ ಸಹಭಾಗಿತ್ವ(ಪಿಪಿಪಿ)ದಲ್ಲಿ ಮೈಸೂರು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ, ಇಂದಿರಾನಗರದ ಸಿ.ವಿ.ರಾಮನ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಹಾಗೂ ಮಲ್ಲೇಶ್ವರಂನಲ್ಲಿರುವ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಸಿಟಿ ಸ್ಕಾೃನ್ ಯಂತ್ರಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು.

ಎಂಆರ್‌ಐ ಸ್ಕಾೃನಿಂಗ್ ಯಾವ ಆಸ್ಪತ್ರೆಯಲ್ಲಿ?
ಜಯನಗರ ಸಾರ್ವಜನಿಕ ಆಸ್ಪತ್ರೆ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಬಾಗಲಕೋಟೆ, ರಾಮನಗರ, ಯಾದಗಿರಿ, ಮೈಸೂರು, ದಾವಣಗೆರೆ ಜಿಲ್ಲಾ ಆಸ್ಪತ್ರೆ, ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ, ಬೆಂಗಳೂರಿನ ಸಿ.ವಿ.ರಾಮನ್ ನಗರ ಆಸ್ಪತ್ರೆ, ಉಡುಪಿ, ವಿಜಯನಗರ, ಚಿಕ್ಕೋಡಿ, ಅರಸೀಕೆರೆ ಸೇರಿದಂತೆ 15 ಆಸ್ಪತ್ರೆಗಳಲ್ಲಿ ಅಂದಾಜು 47.41 ಕೋಟಿ ರೂ.ವೆಚ್ಚದಲ್ಲಿ ಎಂಆರ್‌ಐ ಸ್ಕಾೃನ್ ಯಂತ್ರಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದು ಎಚ್.ಕೆ.ಪಾಟೀಲ ಹೇಳಿದರು.

Share This Article

World Arthritis Day: ಸಂಧಿವಾತ ಕಾಯಿಲೆಗೆ ಚಿಕಿತ್ಸೆಯೇ ಮದ್ದು! ತಜ್ಞವೈದ್ಯೆ ಡಾ. ಅರ್ಚನಾ ಎಂ. ಉಪ್ಪಿನ ಅಭಿಮತ

ಪ್ರಸ್ತುತ ದಿನಗಳಲ್ಲಿ ಬಿಪಿ-ಶುಗರ್ ಸಮಸ್ಯೆಯಂತೆ ಅರ್ಥರೈಟಿಸ್ ( Arthritis ) , ರುಮಾಟಾಲಜಿ (ಸಂಧಿವಾತ/ ಕೀಲುವಾಯು)…

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…