More

    ಇದು ಸಿದ್ಧಾಂತದ ಸೋಲಲ್ಲ, ವೈಯುಕ್ತಿಕ ಸೋಲು: ಸಿ.ಟಿ.ರವಿ

    ಚಿಕ್ಕಮಗಳೂರು: ನಾಲ್ಕು ಬಾರಿ ಶಾಸಕರಾಗಿದ್ದ ಸಿ.ಟಿ.ರವಿ ಈ ಬಾರಿಯ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಮ್ಮ ಆಪ್ತನಾಗಿದ್ದ ಎಚ್.ಡಿ.ತಮ್ಮಯ್ಯ ವಿರುದ್ಧ ಸೋಲು ಅನುಭವಿಸಿದ್ದಾರೆ. ತಮ್ಮಯ್ಯ 60101 ಮತಗಳನ್ನು ಪಡೆದಿದ್ದು, ಸಿ.ಟಿ.ರವಿ 52201 ಮತಗಳನ್ನು ಪಡೆದಿದ್ದಾರೆ.

    ಇದನ್ನೂ ಓದಿ: VIDEO | ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

    ಇದೀಗ ಸಿ.ಟಿ.ರವಿ ಸೋಲಿನ ಬೆನ್ನಲ್ಲೇ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಇದು ಸಿದ್ದಾಂತದ ಸೋಲಲ್ಲ, ವೈಯುಕ್ತಿಕ ಸೋಲು. ಚಿಕ್ಕಮಗಳೂರು ಜನರ ಜನಾದೇಶಕ್ಕೆ ತಲೆಬಾಗುತ್ತಾ, ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತೇನೆ. ಗೆದ್ದವರಿಗೆ ಅಭಿನಂಧನೆ ಸಲ್ಲಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಚಿಕ್ಕಮಗಳೂರಿನಲ್ಲಿ ನೀಡಿದ ಜನಾದೇಶಕ್ಕೆ ತಲೆಬಾಗುತ್ತೇನೆ. ಸೋಲು ಗೆಲುವು ಸ್ವಾಭಾವಿಕ. ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಗೆದ್ದವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಹಿಂದೆ ಸಿಕ್ಕ ಅಲ್ಪ ಸಮಯದಲ್ಲಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ತಂದಿದ್ದು, ಈ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗಲಿ ಎಂದು ಆಶಿಸುತ್ತೇನೆ ಎಂದು ಸಿ.ಟಿ.ರವಿ ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ; ಸಿಹಿ ತಿನ್ನಿಸಿ ಸಂಭ್ರಮಿಸಿದ ಮಲ್ಲಿಕಾರ್ಜುನ ಖರ್ಗೆ

    ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರ ತೀರ್ಮಾನಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತೇನೆ. ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನ ಪಟ್ಟಿದ್ದಾರೆ. ಪಕ್ಷದ ಜವಾಬ್ದಾರಿಯ ಜತೆಗೆ ಇರುವ ಸಮಯದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಸಮಯ ನೀಡಿದ್ದೇನೆ, ಕಾರ್ಯಕರ್ತರು ಧೃತಿಗೆಡುವುದು ಬೇಡ. ಕಾರ್ಯಕರ್ತರಿಗೆ ಸದಾ ಬೆನ್ನೆಲುಬಾಗಿ ನಿಂತು ಧೈರ್ಯ ತುಂಬುವ ಕೆಲಸ ಮಾಡುತ್ತೇನೆ. ಮತ ನೀಡಿದ ಎಲ್ಲಾ ಮತದಾರರಿಗೆ, ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಸಿ.ಟಿ.ರವಿ ಧನ್ಯವಾದ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts