More

    ಮಹಾರಾಷ್ಟ್ರ ಸರ್ಕಾರದಲ್ಲಿ ಶಾಸಕರೇ ಹತಾಶರಾಗಿದ್ದಾರೆ: ಸಿ.ಟಿ.ರವಿ

    ಚಿಕ್ಕಮಗಳೂರು: ಸದ್ಯ ಮಹಾರಾಷ್ಟ್ರದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿಗೆ ಅಲ್ಲಿನ ಸರ್ಕಾರವೇ ಹೊಣೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.

    ಜನ ಮಾತ್ರವಲ್ಲ, ಮಹಾರಾಷ್ಟ್ರ ಸರ್ಕಾರದ ಬಗ್ಗೆ ಮೂರೂ ಪಕ್ಷದ ಶಾಸಕರು ಭ್ರಮನಿರಸರಾಗಿದ್ದಾರೆ.ಶಾಸಕರುಗಳೇ ಹತಾಶರಾಗಿ ಸರ್ಕಾರ ತೊಲಗಿ ಎಂದು ಶಾಸಕರು ಬಯಸಿದ್ದಾರೆ. ಇದು ಯಾವ ತಾಳಮೇಳವೂ ಇಲ್ಲದ ಅಪವಿತ್ರ ಮೈತ್ರಿ ಸರ್ಕಾರ ಎಂದಿದ್ದಾರೆ.

    ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಫಡ್ನವಿಸ್​ ನೇತೃತ್ವದ ಬಿಜೆಪಿ ಸರ್ಕಾರ ಬರಬೇಕೆಂದು ಚುನಾವಣೆ ಸಂದರ್ಭದಲ್ಲೇ ಅಪೇಕ್ಷೆ ಇತ್ತು. 2019ರಲ್ಲಿ ಜನ ಮತ ಹಾಕಿದ್ದು ಮೋದಿ, ಫಡ್ನವಿಸ್ ನೇತೃತ್ವದ ಸರ್ಕಾರಕ್ಕೆ ಆದರೆ ಅಲ್ಲಿ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದರಿಂದ ಶಾಸಕರೇ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದರು.

    ಮಹಾರಾಷ್ಟ್ರ ಸರ್ಕಾರ ತತ್ವಹೀನ ಸರ್ಕಾರ, ಇದಕ್ಕೆ ಸಿದ್ಧಾಂತ, ಅಭಿವೃದ್ಧಿ ಯೋಜನೆಗಳು ಇಲ್ಲವೇ ಇಲ್ಲ. ಈ ಸರ್ಕಾರ ಬೀಳಲಿ ಅಂತ ಜನರು ಹಾಗೂ ಶಾಸಕರೇ ಬಯಸಿದ್ದಾರೆ ಎಂಬುದ ರಾಜಕೀಯ ಬೆಳವಣಿಗೆಯಿಂದ ಸ್ಪಷ್ಟವಾಗಿದೆ ಎಂದು ಹೇಳಿದರು.

    ಮಹಾರಾಷ್ಟ್ರದ ಪ್ರಭಾರಿಯಾಗಿ ನಮ್ಮ ಪಕ್ಷದ ನಾಯಕರ ಜೊತೆ ಸಂಪರ್ಕದಲ್ಲಿದ್ದೇನೆ. ಜನ ಮತ ನೀಡಿದ್ದೇ ಬಿಜೆಪಿ ಮೈತ್ರಿಕೂಟದ ಸರ್ಕಾರಕ್ಕೆ, ಮೋದಿ, ಫಡ್ನವೀಸ್ ನೇತೃತ್ವಕ್ಕೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)

    ಸುಚೇಂದ್ರ ಪ್ರಸಾದ್​ ಜತೆಗೆ ಬಿರುಕು, ಮತ್ತೊಂದು ಮದುವೆಯಾಗಿದ್ದಾರಾ ಪವಿತ್ರಾ ಲೋಕೇಶ್​?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts