ಕಬ್ಬೂರ: ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ

ಕಬ್ಬೂರ: ಪಟ್ಟಣದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಬಿ.ಭ್ರಂಗಿಮಠ ಮಾತನಾಡಿ, ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು ಎಂದರು.

ನಂತರ ಪಟ್ಟಣ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮತದಾನ ಜಾಗೃತಿ ಜಾಥಾದಲ್ಲಿ ಗ್ರಾಮ ಲೆಕ್ಕಾಧಿಕಾರಿ ವಿ.ಎಸ್.ಡವಳೇಶ್ವರ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪಪಂ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *