More

  ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಬೆಳೆಸಿ

  ಶಿವಮೊಗ್ಗ: ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಅತೀ ಮುಖ್ಯ. ಶಿಕ್ಷಣದ ಜತೆಗೆ ಸಂಸ್ಕಾರ ಬೆಳೆಸುವ ಕಾರ್ಯ ಆಗಬೇಕಿದೆ ಎಂದು ಹೊನ್ನಾಳಿ ಹಿರೇಕಲ್ಮಠದ ಶ್ರೀ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

  ತಾಲೂಕಿನ ಹಾರನಹಳ್ಳಿಯಲ್ಲಿ ಗುರುವಾರ ಸಂಜೆ ಶ್ರೀ ಕುಂಭೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 33ನೇ ವಾರ್ಷಿಕೋತ್ಸವ ಹಾಗೂ ಲಿಂ. ಚಂದ್ರಮೌಳೀಶ್ವರ ಶಿವಾಚಾರ್ಯ ಸ್ವಾಮೀಜಿಗಳ 9ನೇ ವರ್ಷದ ಸ್ಮರಣ ದಿನೋತ್ಸವದಲ್ಲಿ ಆಶೀರ್ವಚನ ನೀಡಿದರು.
  ಕುಂಭೇಶ್ವರ ವಿದ್ಯಾಸಂಸ್ಥೆಯು ಶ್ರೀ ರಾಮಲಿಂಗೇಶ್ವರ ಮಠದ ಸಹಯೋಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಮಕ್ಕಳು ಇದರ ಉಪಯೋಗ ಪಡೆಯುವಂತಾಗಲಿ ಎಂದು ಆಶಿಸಿದರು.
  ಅಧ್ಯಕ್ಷತೆ ವಹಿಸಿದ್ದ ಶ್ರೀ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಉತ್ತಮ ಶಿಕ್ಷಕರನ್ನು ಹೊಂದಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದರು. ಆಡಳಿತ ಮಂಡಳಿ ಆಡಳಿತಾಧಿಕಾರಿ ಜಗದೀಶ್ವರಯ್ಯ ಸಮಾರಂಭ ಉದ್ಘಾಟಿಸಿದರು. ನಿವೃತ್ತ ಕಿರಿಯ ತರಬೇತಿ ಅಧಿಕಾರಿ ಕೆ.ಎಂ.ರುದ್ರಪ್ಪ, ಮುಖ್ಯ ಶಿಕ್ಷಕಿ ಎಸ್. ಭಾಗ್ಯವತಿ, ಶಿಕ್ಷಕ ನಾಗರಾಜ್ ಉಪಸ್ಥಿತರಿದ್ದರು. ಸಮಾರಂಭದ ನಂತರ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts