More

    ಮಕ್ಕಳಲ್ಲಿ ಎಲ್ಲರೊಂದಿಗೆ ಬೆರೆಯುವ ಗುಣ ಬೆಳೆಸಿ

    ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಸಂಕುಚಿತ ಭಾವನೆ ಹೋಗಲಾಡಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸೈಯದ್ ಜಮೀಲ್ ಅಹ್ಮದ್ ಹೇಳಿದರು.

    ನಗರದ ಕುವೆಂಪು ಕಲಾಮಂದಿರದಲ್ಲಿ ಅಲ್‌ಅಮೀನ್ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೆಲ ಮಕ್ಕಳು ಒಂದೇ ವಿಷಯಕ್ಕೆ ಸೀಮಿತರಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಹೀಗಾಗದೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮಕ್ಕಳು ಉತ್ತಮ ಒಡನಾಟ ಹೊಂದಿದಾಗ ಸರ್ವಾಂಗೀಣ ಪ್ರಗತಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಬ್ದುಲ್ ಬಷೀರ್ ಮಾತನಾಡಿ, ಬಾಲ್ಯದಿಂದಲೇ ವೇದಿಕೆ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಬುದ್ಧಿ ಶಕ್ತಿ, ಧೈರ್ಯ ಹೆಚ್ಚಿ ಭಯ ದೂರವಾಗುತ್ತದೆ. ಹೀಗಾಗಿ ಪಾಲಕರು ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.
    ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಪಾಲಕರು, ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ದಿ ಸಮಿತಿ ಮಾಜಿ ಅಧ್ಯಕ್ಷ ಅನೀಸ್ ಖೈಸಲ್, ಸದಸ್ಯರಾದ ಸಹೀನ್, ಅಬ್ರಾರ್, ಮೌಲಾನಾ ಔರಂಗಜೇಬ್, ಆಸ್ಕರ್ ಆಲಿಖಾನ್, ಮುಬೀನ್, ಅಕ್ಬರ್, ನಗೀನಾ ಪರ್ವೀನ್, ನಜ್ಮಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts