ವಿಜಯಪುರ: ಶತಮಾನದ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ, ಸಂಸತಿ ಉಳಿಸುವ ಪ್ರಾಮಾಣಿಕ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರ ಕನ್ನಡ ಜ್ಯೋತಿ ರಥ ಯಾತ್ರೆಯ ತಾಯಿ ನಾಡದೇವತೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಐತಿಹಾಸಿಕ ಹಿನ್ನೆಲೆಯಿದ್ದು, ಕನ್ನಡ ಬೆಳೆಸುವ ನಿಟ್ಟಿನಲ್ಲಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಕಸಾಪ ಕಾರ್ಯ ಸ್ಮರಣೀಯ. ಕನ್ನಡ ನಾಡು, ನುಡಿ, ಭಾಷೆಯ ಕುರಿತು ಪ್ರತಿಯೊಬ್ಬರೂ ಅಭಿಮಾನ ಹೊಂದಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ ಮಾತನಾಡಿ, ಕನ್ನಡ ತೇರು ನಾಡಿನಾದ್ಯಂತ ಸಂಚರಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಕನ್ನಡ ಸಾಹಿತ್ಯ ಪರಿಷತ್ ಬೆಳೆಸುವ ನಿಟ್ಟಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯನವರ ಕೊಡುಗೆ ಅಪಾರ. ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ನುಡಿ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ. ಕನ್ನಡ ನೆಲ, ಸಂಸತಿ ಉಳಿಸಲು ಪಣ ತೊಡೋಣ ಎಂದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ತಹಸೀಲ್ದಾರ್ ಪ್ರಶಾಂತ ಚನಗೊಂಡ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಗ್ರಾಮೀಣ ೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ, ಮಾಧವ ಗುಡಿ, ಸುರೇಶ ಜತ್ತಿ, ಅಭಿಷೇಕ ಚಕ್ರವರ್ತಿ, ಡಾ. ಆನಂದ ಕುಲಕರ್ಣಿ, ಸಿದ್ರಾಮಯ್ಯ ಲಕ್ಕುಂಡಿಮಠ, ಜಯಶ್ರೀ ಹಿರೇಮಠ, ಸುನಂದಾ ಕೋರಿ, ರವಿ ಕಿತ್ತೂರ, ವಿಜಯಕುಮಾರ ಘಾಟಗೆ, ಕಮಲಾ ಮುರಾಳ, ವಿಜಯಲಕ್ಷಿ$್ಮ ಹಳಕಟ್ಟಿ, ಅಡಿವೆಪ್ಪ ಸಾಲಗಲ್, ಡಾ. ಸುರೇಶ ಕಾಗಲಕರರಡ್ಡಿ, ಬಸವರಾಜ ಕೊನರಡ್ಡಿ, ಮಹಾದೇವಿ ತೆಲಗಿ ಮತ್ತಿತರರಿದ್ದರು.