ಬಾಳೆಹೊನ್ನೂರು: ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದು ಬಿಜಿಎಸ್ ಕಾಲೇಜು ಸಲಹಾ ಸಮಿತಿ ಸದಸ್ಯ ಕೆ.ಎನ್.ರುದ್ರಪ್ಪಗೌಡ ಹೇಳಿದರು.
ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಬಿಜಿಎಸ್ ಸಮೂಹ ಸಂಸ್ಥೆಯಲ್ಲಿ ಶನಿವಾರ ಆಯೋಜಿಸಿದ್ದ ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ಕಲೆ, ಸಂಸ್ಕೃತಿ ದೇಶದ ಜೀವನಾಡಿಯಾಗಿದ್ದು, ಸಾಂಸ್ಕೃತಿಕ ಚಟುವಟಿಕೆಗಳಿಂದ ವಿದ್ಯಾರ್ಥಿಗಳ ಮನಸ್ಸು ವಿಕಸಿತಗೊಂಡು ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಮಾಡುತ್ತದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ವೇದಿಕೆಗಳು ಪೂರಕವಾಗಿದ್ದು, ಬಿಜಿಎಸ್ ವಿದ್ಯಾಸಂಸ್ಥೆ ಈ ನಿಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಕಾಲೇಜು ಪ್ರಾಚಾರ್ಯ ಡಾ.ವೈ.ಎ.ಸುರೇಶ್ ಮಾತನಾಡಿ, ಒಂದು ದಿನ ಸಂಪೂರ್ಣ ವಿದ್ಯಾರ್ಥಿಗಳಿಗಾಗಿ ಮೀಸಲಿರಿಸಿ ಅವರ ಪ್ರತಿಭೆಗಳನ್ನು ಹೊರ ಹೊಮ್ಮಿಸುವ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆಗಳಿವೆ. ಬಿಜಿಎಸ್ ಸಂಸ್ಥೆ ಅವರಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತಿದೆ. ಸಾಂಸ್ಕೃತಿಕ ಚಟುವಟಿಕೆಗಳ ನಂತರ ವಿದ್ಯಾರ್ಥಿಗಳು ವ್ಯಾಸಂಗದತ್ತ ಗಮನಹರಿಸಿ ಉತ್ತಮವಾಗಿ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು ಎಂದರು.
ಕಳೆದ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಎಚ್.ಎಸ್.ನಾಗವೇಣಿ, ರುಬೀನಾ ಗೊನ್ಸಾಲ್ವಿಸ್, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಎಂ.ಪಿ.ಸಾನ್ವಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಿಜಿಎಸ್ ಕಾಲೇಜು ಸಲಹಾ ಸಮಿತಿ ಸದಸ್ಯರಾದ ಟಿ.ಎಂ.ಉಮೇಶ್ ಕಲ್ಮಕ್ಕಿ, ಎಂ.ಕೆ.ಸುಂದರೇಶ್, ಉಪನ್ಯಾಸಕರಾದ ರಿಚರ್ಡ್ ಮೆನೇಜಸ್, ಉಮೇಶ್ ಮತ್ತಿತರರು ಹಾಜರಿದ್ದರು.
ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಚಟುವಟಿಗಳು ಪೂರಕ
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…