ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Sub_Kukke
Published on

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಾಂಸ್ಕೃತಿಕ ಮತ್ತು ಧರ್ಮ ಸಮ್ಮೇಳನದ ಸಮ್ಮಿಲನದಲ್ಲಿ 4 ದಿನಗಳ ಕಿರುಷಷ್ಠಿ ಮಹೋತ್ಸವ ನೆರವೇರಲಿದೆ. ಜ.2ರಿಂದ 5ರ ತನಕ ಕಿರುಷಷ್ಠಿ ಸಾಂಸ್ಕೃತಿಕ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 5ರಂದು ಸಂಜೆ ದೇವರ ವೈಭವದ ಕಿರುಷಷ್ಠಿ ರಥೋತ್ಸವ ನೆರವೇರಲಿದೆ.

ಇಂದು ಧರ್ಮ ಸಮ್ಮೇಳನ:

ಕಿರುಷಷ್ಠಿ ಸಾಂಸ್ಕೃತಿಕ ವೇದಿಕೆಯಲಿ 2ರಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧರ್ಮ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಮತ್ತು ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಕಲ್ಲಾಜೆ ಮುಖ್ಯಅತಿಥಿಗಳಾಗಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ದೇವಳದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಉಪಸ್ಥಿತರಿರಲಿದ್ದಾರೆ.

ಸಾಂಸ್ಕೃತಿಕ ಸಂಭ್ರಮ:

ಅಂಕುಶ್ ಎನ್.ನಾಯಕ್ ಬಳಗದಿಂದ ಸೀತಾರ್ ವಾದನ ನಡೆಯಲಿದೆ. ನಂತರ ವಿದ್ವಾನ್ ಹರಿಪ್ರಸಾದ್ ಸುಬ್ರಹ್ಮಣ್ಯಂ ಕೊಚ್ಚಿನ್ ಇವರಿಂದ ಕೊಳಲು ವಾದನ ನೆರವೇರಲಿದೆ. ಇವರಿಗೆ ವಯಲೀನ್‌ನಲ್ಲಿ ವಿದ್ವಾನ್ ಮಾಂಜೂರ್ ರಂಜಿತ್, ಮೃದಂಗಂ ವಿದ್ವಾನ್ ಡಾ.ಕೆ.ಜಯಕೃಷ್ಣನ್, ಘಟಂ ವಿದ್ವಾನ್ ಮಾಂಜೂರ್ ಉಣ್ಣಿಕೃಷ್ಣನ್ ಹಿಮ್ಮೇಳ ಸಹಕಾರ ನೀಡಲಿದ್ದಾರೆ. ಡ್ಯಾನ್ಸ್ ಬೀಟ್ಸ್ ಬೆಳ್ಳಾರೆ ತಂಡದಿಂದ ನೃತ್ಯ ಸಂಭ್ರಮ, ಬಳಿಕ ಮನೋಜ್ ಕುಮಾರ್ ಪೂಕುನ್ನತ್ ಪೊಯಿನಾಚಿ ಇವರಿಂದ ಸ್ವರ ರಾಗಂ ಆರ್ಕೆಸ್ಟ್ರಾ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net