ಗಂಗೊಳ್ಳಿ: ಪಾಲಕರು ಮಕ್ಕಳಿಗೆ ಬಾಲ್ಯದಿಂದಲೇ ನಮ್ಮ ಸಂಸ್ಕೃತಿ ಸಂಸ್ಕಾರದ ಶಿಕ್ಷಣ ನೀಡಿದರೆ ಅವರು ಸತ್ಪ್ರಜೆಯಾಗಿ ಬೆಳೆಯಲು ಸಹಕಾರಿ. ಮಕ್ಕಳಿಗೆ ಉತ್ತಮ ಸಂಸ್ಕಾರಗಳು ದೊರೆತರೆ ನಮ್ಮ ಸಂಸ್ಕೃತಿ ಬೆಳೆಯಲು ಸಾಧ್ಯ ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಹೇಳಿದರು.
ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಆಶ್ರಯದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಸಹಯೋಗದೊಂದಿಗೆ ಭಾನುವಾರ 38ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಟ್ಕಳ ಕುಂಟವಾಣಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಡಾ.ಸುರೇಶ ಎಂ.ತಾಂಡೇಲ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಸೇವಾ ಸಂಗಮ ಶಿಶು ಮಂದಿರ ಅಧ್ಯಕ್ಷ ಮಂಜುನಾಥ ಶೆಟ್ಟಿ ಬೌದ್ಧಿಕ್ ನೀಡಿದರು. ಸದಸ್ಯರಾದ ಭಾಸ್ಕರ ಎಚ್.ಜಿ, ಎಂ.ನಾಗೇಂದ್ರ ಪೈ, ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ವಸಂತಿ ಎನ್.ಖಾರ್ವಿ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನಾ, ಗಂಗೊಳ್ಳಿ ರೋಟರಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ಸವಿತಾ ಯು.ದೇವಾಡಿಗ ಸ್ವಾಗತಿಸಿದರು. ಬಿ.ಲಕ್ಷ್ಮೀಕಾಂತ ಮಡಿವಾಳ ನಿರ್ವಹಿಸಿದರು. ಅಶ್ವಿತಾ ಜಿ.ಪೈ ವಂದಿಸಿದರು.