

ಹೆಬ್ರಿ: ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲು ಓದಿನ ಜತೆಗೆ ಸಂಸ್ಕೃತಿ, ಸಂಸ್ಕಾರ ಬಹಳ ಮುಖ್ಯ ಎಂದು ನಿವೃತ್ತ ಪ್ರಾಧ್ಯಾಪಕ ತೀರ್ಥಹಳ್ಳಿಯ ರಮೇಶ್ ಕೆ.ಟಿ.ಹೇಳಿದರು.
ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.
ವರಂಗ ಗ್ರಾ.ಪಂ.ಅಧ್ಯಕ್ಷ ಸಂತೋಷ್ ಅಮೀನ್ ಉದ್ಘಾಟಿಸಿದರು. ಪ್ರಾಂಶುಪಾಲ ಕೆ.ಜಿ.ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸರ್ವಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿ ಪ್ರಮುಖರು ಉಪಸ್ಥಿತರಿದ್ದರು. ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ.ಮಂಜುನಾಥ ಆಚಾರಿ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕ ದೇವರಾಜು ಕೆ.ಸ್ವಾಗತಿಸಿದರು. ಆಂಗ್ಲಭಾಷಾ ಪ್ರಾಧ್ಯಾಪಕ ಝಬುನ್ನೀಸ ಅಬ್ದುಲ್ ರಜಾಕ್ ವಂದಿಸಿದರು.