ಗಣೇಶೋತ್ಸವ ಆಚರಣೆಗೆ ಷರತ್ತು ವಿಧಿಸಿದ್ದು ಸರಿಯಲ್ಲ

PJ NEW
Published on

ಹುಬ್ಬಳ್ಳಿ : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಜಿಲ್ಲಾಡಳಿತ ಹಲವಾರು ಷರತ್ತುಗಳನ್ನು ವಿಧಿಸಿರುವುದು ಸರಿಯಲ್ಲ. ನಮ್ಮ ಧಾರ್ವಿುಕ ಹಬ್ಬದ ಆಚರಣೆಗೆ ಷರತ್ತು ವಿಧಿಸಲು ಇವರು ಯಾರು ಎಂದು ಪ್ರಶ್ನಿಸಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜನರ ಧಾರ್ವಿುಕ ಭಾವನೆಗಳೊಂದಿಗೆ ಚಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವರ್ತನೆ ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಸಚಿವ ಪ್ರಲ್ಹಾದ ಜೋಶಿ, ಸಾಮಾನ್ಯವಾಗಿ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಗಣಪತಿ ಮೂರ್ತಿಗಳು ನಾಲ್ಕು ಅಡಿಗಳಿಗಿಂತ ಎತ್ತರವಿರುತ್ತವೆ. ಇದು ನಮ್ಮ ಭಕ್ತಿಯ ಸಂಕೇತ. ಆದರೆ ಇವರು ವಿಧಿಸಿರುವ ಷರತ್ತಿನಲ್ಲಿ ನಾಲ್ಕು ಅಡಿ ಮೀರಬಾರದು ಎಂದಿರುವುದು ಹಾಸ್ಯಾಸ್ಪದವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ಹಬ್ಬಗಳನ್ನು ಸಂಭ್ರಮದಿಂದ ಆಚರಿಸಬೇಕೆ ಹೊರತು, ಆತಂಕದಿಂದಲ್ಲ. ನಮ್ಮ ಮತಗಳು ಇವರಿಗೆ ಬೇಕು, ನಮ್ಮ ಸಂಸ್ಕೃತಿ ಬೇಡವೇ ? ಎಂದು ಪ್ರಶ್ನಿಸಿದ್ದಾರೆ.

ಈ ಷರತ್ತುಗಳು ಇಂಡಿ ಮೈತ್ರಿಕೂಟದ ಧ್ಯೇಯವಾದ ಸನಾತನ ಧರ್ಮದ ನಾಶದ ಮುನ್ನುಡಿ ಬರೆದಂತಿದೆ. ವಿಧಿಸಿರುವ ಷರತ್ತುಗಳನ್ನು ಕೂಡಲೇ ವಾಪಸ್ ಪಡೆದು, ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅನುಮತಿ ನೀಡಬೇಕು. ನಾವೇನು ದೇಶದ್ರೋಹ ಕೆಲಸ ಮಾಡುತ್ತಿಲ್ಲ, ನಮ್ಮ ಆಚಾರ-ವಿಚಾರ ಸಂಸ್ಕೃತಿಗೆ ಧಕ್ಕೆ ತರಲು ಮುಂದಾಗಿರುವ ಸರ್ಕಾರದ ನಡೆ ಖಂಡನೀಯ ಎಂದು ತಿಳಿಸಿದ್ದಾರೆ.

ಒಂದೊಮ್ಮೆ ಷರತ್ತುಗಳನ್ನು ಸಡಿಲಿಕೆ ಮಾಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನು ಕಾಂಗ್ರೆಸ್ ಎದುರಿಸಬೇಕಾಗುತ್ತದೆ. ಹಿಂದುಗಳ ಹಬ್ಬಗಳಿಗೆ ಅಡೆತಡೆಗಳನ್ನು ಒಡ್ಡಬಾರದು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net