More

    ಅಕ್ರಮ ಚಟುವಟಕೆಗೆ ಕಡಿವಾಣ ಹಾಕಿ

    ಸಾಗರ: ಪೊಲೀಸರು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಉತ್ತಮ ವಾತಾವರಣ ನಿರ್ಮಿಸಿಕೊಡುವುದು ಜನಪ್ರತಿನಿಧಿಗಳಾದ ನಮ್ಮ ಜವಾಬ್ದಾರಿ ಎಂದು ಗೋಪಾಲಕೃಷ್ಣ ಬೇಳೂರು ಹೇಳಿದರು.

    ಆನಂದಪುರದಲ್ಲಿ ಮಂಗಳವಾರ ನೂತನ ಪೊಲೀಸ್ ಠಾಣೆ ಉದ್ಘಾಟನೆ, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ, ಟೂಲ್ಸ್ ಕಿಟ್ ವಿತರಿಸಿ ಮಾತನಾಡಿದರು.
    ಮಟ್ಕಾ, ಗಾಂಜಾ ಸಾಗಣೆ, ಮಾರಾಟ ಮತ್ತಿತರ ದಂಧೆಗಳು ನಮ್ಮ ಕ್ಷೇತ್ರದಲ್ಲಿ ಇರಬಾರದು. ಕಡಿವಾಣ ಹಾಕಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಪೊಲೀಸ್ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯವೈಖರಿ ಇತರೆ ಅಧಿಕಾರಿ, ಸಿಬ್ಬಂದಿಗೆ ಪ್ರೇರಣೆಯಾಗಿದೆ ಎಂದರು.
    ನಮಗೆ ರಕ್ಷಣೆ ಕೊಡಲು ಪೊಲೀಸ್ ಠಾಣೆ ಇದೆ. ಸಾರ್ವಜನಿಕರು ಅಗತ್ಯ ಸಂದರ್ಭ ಇದರ ಪ್ರಯೋಜನ ಪಡೆದುಕೊಳ್ಳಬೇಕು. ಪೊಲೀಸರ ವಸತಿ, ಮೂಲ ಸೌಕರ್ಯ ಕೊರತೆ ಮತ್ತಿತರ ಸಮಸ್ಯೆಗಳು ನನ್ನ ಗಮನಕ್ಕೆ ಬಂದಿವೆ. ಅದನ್ನು ಪೂರೈಸುವಲ್ಲಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ಎಸ್ಪಿ ಮಿಥುನ್‌ಕುಮಾರ್ ಮಾತನಾಡಿ, ಗುಣಮಟ್ಟದ ಕಾಮಗಾರಿ ನಡೆದಿದೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಬೇಕಾದರೆ ಇಂತಹ ಸೌಲಭ್ಯ ಅಗತ್ಯ ಎಂದರು. ಗ್ರಾಪಂ ಅಧ್ಯಕ್ಷ ಮೋಹನ್‌ಕುಮಾರ್, ಪ್ರಮುಖರಾದ ಖಲೀಂವುಲ್ಲಾ, ಮಲ್ಲಿಕಾರ್ಜುನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts