More

    ಗಾಂಜಾ ಬಳಕೆಗೆ ಕಡಿವಾಣ ಅವಶ್ಯ: ಡಾ.ಆರ್.ಸೆಲ್ವಮಣಿ

    ಶಿವಮೊಗ್ಗ: ಮಾದಕ ಪದಾರ್ಥಗಳ ಉತ್ಪಾದನೆ, ಸಾಗಣೆ, ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸುವ ವಿವಿಧ ಇಲಾಖೆಗಳ ಕೆಲಸಕ್ಕೆ ಸಾರ್ವಜನಿಕರೂ ಅಗತ್ಯ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.

    ಮಾದಕ ವಸ್ತುಗಳ ನಿಯಂತ್ರಣದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಅವರು, ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಶಾಲಾ, ಕಾಲೇಜು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ನಿಗಾ ವಹಿಸುವ ಅವಶ್ಯಕತೆಯಿದೆ ಎಂದರು.
    ಮಾದಕ ವಸ್ತುಗಳ ಬಳಕೆ ಬಗ್ಗೆ ಏನಾದರೂ ಮಾಹಿತಿ ಇದ್ದರೆ ಶಿಕ್ಷಣ ಸಂಸ್ಥೆಗಳು, ಶಿಕ್ಷಣ ಇಲಾಖೆ, ಪ್ರಾಚಾರ್ಯರು ತಮಗೆ ತಿಳಿದಿರುವ ಸಂಗತಿಗಳನ್ನು ಪೊಲೀಸರ ಗಮನಕ್ಕೆ ತರಬೇಕು. ಜಿಲ್ಲೆಯಲ್ಲಿ ಗಾಂಜಾ ಬೆಳೆದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿದರು.
    ಶಿಕಾರಿಪುರ, ಸೊರಬ, ಆನವಟ್ಟಿ, ಶಿರಾಳಕೊಪ್ಪ, ಕುಂಸಿ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಗ್ರಾಮಾಂತರ, ರಿಪ್ಪನ್‌ಪೇಟೆ, ಸಾಗರ ಗ್ರಾಮಾಂತರ ಹಾಗೂ ಹೊಸನಗರದ ಹಲವೆಡೆ ಗಾಂಜಾ ಬೆಳೆದಿರುವುದನ್ನು ಪತ್ತೆ ಮಾಡಲಾಗಿದೆ. ಅರಣ್ಯಕ್ಕೆ ಹೊಂದಿಕೊಂಡಂತಿರುವ ಜಮೀನುಗಳಲ್ಲಿ ಶುಂಠಿ, ಮೆಕ್ಕೆಜೋಳದೊಂದಿಗೆ ಗಾಂಜಾ ಬೆಳೆದಿರುವುದನ್ನು ಗಮನಿಸಿ ಪ್ರಕರಣ ದಾಖಲಿಸಲಾಗಿದೆ ಎಂದರು.
    ಗಾಂಜಾ ನಿಯಂತ್ರಣದಲ್ಲಿ ಶಿಕ್ಷಣ, ಅರಣ್ಯ, ಕಂದಾಯ, ಆರೋಗ್ಯ, ಔಷಧ ನಿಯಂತ್ರಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಹೇಳಿದರು.
    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಡಿಎಚ್‌ಒ ಡಾ.ರಾಜೇಶ್ ಸುರಗೀಹಳ್ಳಿ, ಔಷಧ ನಿಯಂತ್ರಣಾಧಿಕಾರಿ ಡಾ.ವೀರೇಶ್‌ಬಾಬು ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts