More

    ಡೊನೇಷನ್ ಹಾವಳಿಗೆ ಕಡಿವಾಣ ಹಾಕಿ

    ಶಿವಮೊಗ್ಗ: ಖಾಸಗಿ ಪಿಯು ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ತಪ್ಪಿಸಬೇಕೆಂದು ಎನ್‌ಎಸ್‌ಯುಐ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿ ಡಿಡಿಪಿಯು ಕೃಷ್ಣಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆಯೇ ಡೊನೇಷನ್ ಹಾವಳಿ ಮಿತಿಮೀರಿದೆ. ಪದವಿಪೂರ್ವ ಶಿಕ್ಷಣಕ್ಕಾಗಿ ಪಾಲಕರು ಲಕ್ಷಾಂತರ ರೂ. ಡೊನೇಷನ್ ಪಾವತಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಬೇಕಿದೆ. ಸರ್ಕಾರ ನಿಗಪಡಿಸಿದ ಶುಲ್ಕವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
    ಸರ್ಕಾರ ಖಾಸಗಿ ಶಾಲೆಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಶಾಲೆಗಳು ಬಡವರಿಗೂ ಅನುಕೂಲವಾಗುವಂತೆ ನಿಗದಿತ ಶುಲ್ಕವನ್ನು ಮಾತ್ರ ತೆಗೆದುಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಲಿತಾಂಶ ಪ್ರಕಟಗೊಂಡು ವಾರದೊಳಗೆ ಖಾಸಗಿ ಪಿಯು ಕಾಲೇಜುಗಳ ಪ್ರವೇಶಾತಿ ಮುಗಿದುಬಿಟ್ಟಿದೆ ಎಂದರೆ ಏನರ್ಥ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಸಾವಿರಾರು ವಿದ್ಯಾರ್ಥಿಗಳು ಪಿಯು ಶಿಕ್ಷಣದಿಂದ ವಂಚಿತರಾಗುವ ಅಪಾಯವಿದೆ. ಆದ್ದರಿಂದ ಖಾಸಗಿ ಪಿಯು ಕಾಲೇಜುಗಳು ರೋಸ್ಟರ್ ಪದ್ಧತಿಯನ್ನು ಅನುಸರಿಸಿ ಪ್ರವೇಶ ಪ್ರಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.
    ಎನ್‌ಐಎಸ್‌ಯುಐ ಜಿಲ್ಲಾಧ್ಯಕ್ಷ ಎಸ್.ಎನ್.ವಿಜಯ್‌ಕುಮಾರ್, ಕಾರ್ಯಾಧ್ಯಕ್ಷ ರವಿಕುಮಾರ್, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts