More

    ಅಡಕೆ ಅಕ್ರಮ ಆಮದಿಗೆ ಕಡಿವಾಣ ಹಾಕಿ

    ಶಿವಮೊಗ್ಗ: ಅಕ್ರಮವಾಗಿ ಅಡಕೆ ಆಮದು ಆಗುತ್ತಿರುವುದರಿಂದ ಬೆಲೆಯಲ್ಲಿ ತೀವ್ರ ಇಳಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಬೆಳೆಗಾರರಿಗೆ ಆಗುತ್ತಿರುವ ದುಷ್ಪರಿಣಾಮಗಳ ಕುರಿತು ಕೇಂದ್ರ ಸರ್ಕಾರ ನಿರ್ಲಕ್ಷೃ ಮಾಡುವುದಿಲ್ಲ. ತಕ್ಷಣವೇ ಅಧಿಕಾರಿಗಳಿಗೆ ಸೂಚನೆ ನೀಡಿ ಅಕ್ರಮ ಆಮದು ನಿರ್ಬಂಧಕ್ಕೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಸೋಮವಾರ ತಮ್ಮನ್ನು ಭೇಟಿಯಾದ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

    ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾದ ಅಡಕೆ ಸಹಕಾರ ಸಂಘಗಳ ಮಹಾಮಂಡಲದ ನಿಯೋಗ, ಅಡಕೆಯ ಅಕ್ರಮ ಆಮದು ಕಾರಣದಿಂದ ಆಗಿರುವ ಅನಾಹುತಗಳನ್ನು ಮನವರಿಕೆ ಮಾಡಿಕೊಟ್ಟಿತು.
    ನಿಯೋಗದ ನೇತೃತ್ವ ವಹಿಸಿದ್ದ ಕ್ರಾೃಮ್ ಅಧ್ಯಕ್ಷ ಎಚ್.ಎಸ್.ಮಂಜಪ್ಪ ಹೊಸಬಾಳೆ, ಅಡಕೆ ಬೆಳೆಗಾರರ ಸಂಕಷ್ಟಗಳ ಬಗ್ಗೆ ಮಾಹಿತಿ ನೀಡಿದರು. ಸಾಗರ, ಹೊಸನಗರ, ತೀರ್ಥಹಳ್ಳಿ ಹಾಗೂ ಸೊರಬ ತಾಲೂಕುಗಳಲ್ಲಿ ಶೇ.80ರಷ್ಟು ಸಾಂಪ್ರದಾಯಿಕ ಬೆಳೆಗಾರರಿದ್ದಾರೆ. ಇವರೆಲ್ಲ ಸಣ್ಣ ಹಾಗೂ ಮಧ್ಯಮ ವರ್ಗದ ಕೃಷಿಕರು. ಅಡಕೆ ಬೆಲೆ ಕುಸಿತದ ನೇರ ಪರಿಣಾಮ ಈ ಬೆಳೆಗಾರರ ಮೇಲಾಗುತ್ತಿದೆ ಎಂದರು.
    ಅಕ್ರಮ ಆಮದಿನಿಂದ ಸರ್ಕಾರಕ್ಕೆ ಕೂಡ ದೊಡ್ಡ ಪ್ರಮಾಣದ ತೆರಿಗೆ ನಷ್ಟವಾಗುತ್ತಿದೆ. ಜತೆಗೆ ಅಡಕೆ ಬೆಲೆ ಕುಸಿತದಿಂದ ವ್ಯಾಪಾರಿ ವಲಯದ ಮೇಲೂ ದುಷ್ಪರಿಣಾಮ ಉಂಟಾಗುತ್ತದೆ. ತೆರಿಗೆ ಸಂಗ್ರಹದಲ್ಲಿ ಕುಸಿತವಾಗುತ್ತದೆ. ಹೀಗಾಗಿ ಕಾನೂನು ಕ್ರಮಗಳ ಮೂಲಕ ಅಕ್ರಮ ಆಮದು ತಡೆಯಬೇಕೆಂದು ಮನವಿ ಮಾಡಿದರು.
    ಅಡಕೆ ಸಹಕಾರ ಸಂಘಗಳ ಮಹಾಮಂಡಲದ ಅಧ್ಯಕ್ಷ ಸುಬ್ರಹ್ಮಣ್ಯ ಯಡಗೆರೆ, ಸಾಗರದ ಆಪ್ಸ್‌ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಗೌಡ, ಮ್ಯಾಮ್‌ಕೋಸ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬರುವೆ, ಶಿರಸಿ ಟಿಎಸ್‌ಎಸ್‌ನ ಪ್ರಧಾನ ವ್ಯವಸ್ಥಾಪಕ ವಿಜಯಾನಂದ ಭಟ್ ನಿಯೋಗದಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts