More

    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ


    ಹುಣಸೂರು : ತಾಲೂಕಿನ ಹಲವಾರು ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಅಬಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಜಿಲ್ಲಾ ಸಂಚಾಲಕ ನಿಂಗರಾಜ ಮಲ್ಲಾಡಿ ಆರೋಪಿಸಿದ್ದಾರೆ.


    ತಾಲೂಕಿನ ಕಟ್ಟೆಮಳಲವಾಡಿ, ಯಶೋಧರಪುರ, ಮಂಗಳೂರು ಮಾಳ, ಅಂಬೇಡ್ಕರ್ ನಗರ, ರತ್ನಪುರಿ, ದೊಡ್ಡಹೆಜ್ಜೂರು, ಹನಗೋಡು, ಆದಿವಾಸಿಗಳು ವಾಸಮಾಡುವ ನಾಗಾಪುರ ಹಾಡಿ, ನೇರಳಕುಪ್ಪೆ, ಶೆಟ್ಟಹಳ್ಳಿ ಹಾಡಿ, ಚಂದನಗಿರಿ ಹಾಡಿ, ಪಕ್ಷಿರಾಜಪುರ ಮುಂತಾದ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ.

    ಅಬಕಾರಿ ಅಧಿಕಾರಿಗಳು ನೆಪಮಾತ್ರಕ್ಕೆ ಗ್ರಾಮಗಳಿಗೆ ಭೇಟಿ ನೀಡಿ ಅಕ್ರಮವಾಗಿ ಮಧ್ಯ ಮಾರಾಟಗಾರರನ್ನು ಬಂಧಿಸದೆ ಗ್ರಾಮದಿಂದ ಹೋಗುತ್ತಿದ್ದಾರೆ. ಅಧಿಕಾರಿಗಳೇ ಪರೋಕ್ಷವಾಗಿ ಬಾರ್ ಮಾಲೀಕರ ಜತೆ ಹೊಂದಾಣಿಕೆ ಮಾಡಿಕೊಂಡು ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಹಕರಿಸುವ ಅನುಮಾನ ಸಾರ್ವಜನಿಕರಲ್ಲಿ ಮೂಡಿಬಂದಿದೆ ಎಂದು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.


    ಕಟ್ಟೆಮಳಲವಾಡಿ ದೊಡ್ಡ ಗ್ರಾಮದಲ್ಲೇ ಸುಮಾರು 20 ಮನೆಗಳಲ್ಲಿ ಅಕ್ರಮವಾಗಿ ಮದ್ಯ ಮತ್ತು ಗಾಂಜಾ ಮಾರಾಟವಾಗುತ್ತಿದೆ. ಅಬಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡು ಅಕ್ರಮಗಳನ್ನು ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts