More

    ದುಬಾರಿ ಶುಲ್ಕ ವಸೂಲಿಗೆ ಕಡಿವಾಣ ಹಾಕಿ

    ರಾಯಚೂರು: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಅನಕೃತವಾಗಿ ದುಬಾರಿ ಶುಲ್ಕ ಪಡೆಯುತ್ತಿರುವುದಕ್ಕೆ ಕಡಿವಾಣ ಹಾಕಬೇಕು. ಉಚಿತ, ಕಡ್ಡಾಯ ಮತ್ತು ವೈಜ್ಞಾನಿಕ ಶಿಕ್ಷಣ ಸಮರ್ಪಕ ಜಾರಿಗೊಳಿಸಬೇಕು ಎಂದು ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ.
    ಪಕ್ಷದ ನಿಯೋಗ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮಂಗಳವಾರ ಮನವಿ ಸಲ್ಲಿಸಿ, ರಾಜ್ಯದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಬಡ ಮತ್ತು ಮಧ್ಯಮ ವರ್ಗದ ಮಕ್ಕಳು ಶಿಕ್ಷಣ ಪಡೆಯಲು ಅಡ್ಡಿಯುಂಟಾಗಿವೆ ಎಂದು ದೂರಿದರು.
    ಶಿಕ್ಷಣವನ್ನು ವ್ಯಾಪಾರದ ಕೇಂದ್ರವನ್ನಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾರಾಟಕ್ಕಿಟ್ಟಿದ್ದು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಸಮರ್ಪಕ ಜಾರಿಯಾಗದೆ ಸರ್ಕಾರಿ ಶಾಲೆ, ಕಾಲೇಜುಗಳನ್ನು ಮುಚ್ಚಲಾಗುತ್ತಿದೆ. ರಾಜಕಾರಣಿಗಳು, ಶ್ರೀಮಂತರು ಶಿಕ್ಷಣ ಕ್ಷೇತ್ರದಲ್ಲಿ ಬಂಡವಾಳ ಹೂಡಿ ದುಬಾರಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ.
    ಪ್ರತಿವರ್ಷ ಶೇ.15ರಷ್ಟು ಶುಲ್ಕ ಹೆಚ್ಚಳ ಮಾಡಲು ಅವಕಾಶ ನೀಡುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಖಾಸಗಿ ಶಾಲೆಗಳಲ್ಲಿ ಶುಲ್ಕ ನಿಗದಿಗೆ ರಾಜ್ಯ ಸರ್ಕಾರಕ್ಕೆ ಅಕಾರವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಜನರ ರಕ್ತ ಹೀರಲು ಮುಂದಾಗಿವೆ.
    ಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಕಾನೂನು ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮಕೈಗೊಳ್ಳಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ನಿಯೋಗದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯ ಎಂ.ಗಂಗಾಧರ, ಜಿಲ್ಲಾ ಸಮಿತಿ ಸದಸ್ಯ ಅಜೀಜ್ ಜಾಗೀರದಾರ್, ತಾಲೂಕು ಕಾರ್ಯದರ್ಶಿ ಆರ್.ಹುಚ್ಚರೆಡ್ಡಿ, ಪದಾಕಾರಿಗಳಾದ ನಬೀಸಾಬ್, ನಿರಂಜನಕುಮಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts