ಮೇಲ್‌ಗಂಗೊಳ್ಳಿಯಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ

Published on

ಕುಂದಾಪುರ: ಮೇಲ್‌ಗಂಗೊಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಹಾಗೂ ಗಂಗೊಳ್ಳಿ ಜೆಸಿಐ ಸಂಯುಕ್ತಾಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 13ನೇ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಮೇಲ್‌ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಆ.17ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಮರವಂತೆ ಬಡಾಕೆರೆ ವ್ಯವಸಾಯ ಸಹಕಾರಿ ಸಂ ಅಧ್ಯಕ್ಷ ಜಗದೀಶ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಅಧ್ಯಕ್ಷ ಸುಧಾಕರ ಆಚಾರ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕುಂದಾಪುರ ವಕೀಲ ಟಿ.ಬಿ.ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net