ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ!

KRS
Published on

ನವದೆಹಲಿ: ಕಾವೇರಿ ನದಿ ವಿಚಾರದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ವಿವಾದ ಮುಂದುವರೆದಿದೆ. ಇದರ ನಡುವೆ ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಮಂಗಳವಾರ ಸಭೆ ನಡೆಸಿದ ಪ್ರಾಧಿಕಾರ, ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ಹರಿಸಲು ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.

ಇತ್ತೀಚೆಗೆ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಮಿತಿ ಸಭೆಯಲ್ಲಿ ಕರ್ನಾಟಕದಲ್ಲಿ ಬರಗಾಲದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಿಲ್ಲ ಎಂದು ಸಮಿತಿಯು ತಮಿಳುನಾಡಿಗೆ ಸೂಚಿಸಿತ್ತು. ಇದೀಗ ಮಂಗಳವಾರ ನಡೆದ ಸಭೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿದೆ.

ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕೊಡಗಿನ ತ್ರಿವೇಣಿ ಸಂಗಮದಲ್ಲಿ ಮಳೆ ಹೆಚ್ಚಾಗಿದ್ದು, ಕಾವೇರಿ ಒಡಲಿಗೆ ಜೀವಕಳೆ ಬಂದಿದೆ. ಪರಿಣಾಮ ಕೆಆರ್‌ಎಸ್ ಒಳ ಹರಿವು ಹೆಚ್ಚಾಗಿದೆ. ಕಳೆದೊಂದು ವಾರದಲ್ಲಿ 1 ಟಿಎಂಸಿಯಷ್ಟು ನೀರು ಕನ್ನಂಬಾಡಿ ಕಟ್ಟೆ ಸೇರಿದೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net