More

    ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆ; ಡಿ. 23ರ ವರೆಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ

    ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಡಿಸೆಂಬರ್​ 23ರ ವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ.

    ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ CWRC ಕರ್ನಾಟಕ ಹಾಗೂ ತಮಿಳುನಾಡಿನೊಂದಿಗೆ 90ನೇ ಬಾರಿ ಸಭೆ ನಡೆಸಿದೆ. ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ.

    ಇಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್​ ಅವಧಿಯಲ್ಲಿ ಹರಿಸಬೇಕಿದ್ದ 6 ಟಿಎಂಸಿ ನೀರು ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಬೇಡಿಕೆ ಇಟ್ಟಿದೆ. ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ಹಾಗೂ ಡಿಸೆಂಬರ್ ನ ಅವಧಿಯಲ್ಲಿ ಹರಿಸಬೇಕಿರುವ 6 ಟಿಎಂಸಿ ಸೇರಿದಂತೆ ಒಟ್ಟು 17 ಟಿಎಂಸಿ ನೀರು ಹರಿಸಬೇಕೆಂದು ಪಟ್ಟು ಹಿಡಿದಿತ್ತು.

    cauvery

    ಇದನ್ನೂ ಓದಿ: ವ್ಹಾವ್​ ಚೆಂಡು ಹೂವಿನಿಂದ ತಯಾರಾಯ್ತು ತಣ್ಣನೆಯ ಐಸ್​ಕ್ರೀಂ; ಒಮ್ಮೆಯಾದರೂ ಟೇಸ್ಟ್​ ಮಾಡಬೇಕೆಂದ ನೆಟ್ಟಿಗರು

    ತಮಿಳುನಾಡಿನ ಮೊಂಡು ವಾದಕ್ಕೆ ತಕ್ಕ ಕೌಂಟರ್ ಕೊಟ್ಟ ಕರ್ನಾಟಕ ರಾಜ್ಯದಲ್ಲಿ ಈಗ ಬರ ಪರಿಸ್ಥಿತಿ ಎದುರಾಗಿದ್ದು, ತಮಿಳುನಾಡು 17 ಟಿಎಂಸಿ ನೀರು ಕೇಳುತ್ತಿರುವುದಕ್ಕೆ ಯಾವುದೇ ಅರ್ಥವಿಲ್ಲ. ವೇರಿ ಕೊಳ್ಳದ ಜಲಾಶಯಗಳಲ್ಲಿ ಸಾಕಷ್ಟು ನೀರಿಲ್ಲ. ಕುಡಿಯುವ ಬಳಕೆಗೂ ನೀರು ಸಂಗ್ರಹವಿಲ್ಲ. ಕರ್ನಾಟಕದಲ್ಲಿ ಮುಂದೆ ಮಳೆಯಾಗುವ ಸಾಧ್ಯತೆ ಸಹ ಕಡಿಮೆ. 

    ತಮಿಳುನಾಡು ರಾಜ್ಯದಲ್ಲಿ ಈಗ ಹೆಚ್ಚು ಮಳೆಯಾಗುತ್ತಿದೆ. ಹಿಂಗಾರು ಮಾರುತಗಳು ಪ್ರಬಲವಾಗಿವೆ, ಮಳೆ ಹೆಚ್ಚು ಸುರಿಯುತ್ತಿದೆ. ತಮಿಳುನಾಡಿಗೆ ನೀರು ಬಿಟ್ಟರೆ ವಾಪಸ್ ತೆಗೆದುಕೊಳ್ಳಲು ಸಾಧ್ಯವವೇ ಎಂದು ಪ್ರಶ್ನಿಸಿದೆ. ಹೀಗಾಗಿ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕದ ಅಧಿಕಾರಿಗಳು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಎದುರು ವಾದ ಮಂಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts