More

    ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್: ಅ.15 ರವರೆಗೆ 3000 ಕ್ಯೂಸೆಕ್ ನೀರು ಬಿಡಲು ಶಿಫಾರಸು

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ ಆಚರಿಸುತ್ತಿರುವುದರ ನಡುವೆಯೇ ಕನ್ನಡಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ. ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ.

    ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್​ಸಿ ಇಂದು ನಡೆದ ಸಭೆಯಲ್ಲಿ ಶಿಫಾರಸು ಮಾಡಿದೆ.

    ಇಂದು ನಡೆದ CWRC ಸಭೆಯ ಚರ್ಚೆಯ ಸಾರಾಂಶ

    ಕರ್ನಾಟಕವು CWRC ಮುಂದೆ ಈ ಕೆಳಗಿನ ಸಂಗತಿಗಳನ್ನು CWMAಗೆ ವರದಿ ಮಾಡಲು ವಿನಂತಿಸಿದೆ:

    1. 25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 53.04% ಆಗಿದೆ.

    2. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಅಂಶವು ಅತ್ಯಂತ ಮನ್ನಣೆಯ ಅಗತ್ಯವಿದೆ ಮತ್ತು ಸಮಿತಿಯಿಂದ ವಿಮರ್ಶಾತ್ಮಕ ಪರಿಗಣನೆಯನ್ನು ಆಹ್ವಾನಿಸುತ್ತದೆ.

    3. ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಅಥವಾ ಅದರ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಬೇಕಾದ ಹರಿವುಗಳಿಗೆ ಕೊಡುಗೆ ನೀಡುವುದಿಲ್ಲ.

    ತಮಿಳುನಾಡು CWRCಯನ್ನು ಒತ್ತಾಯಿಸಿದ ಅಂಶಗಳು

    1. ಕರ್ನಾಟಕವೂ ಸಹ ಸಂಕಷ್ಟದ ಅನುಪಾತದ ಆಧಾರದ ಮೇಲೆ ನೀರಾವರಿ ಪೂರೈಕೆಯನ್ನು ಕಡಿಮೆ ಮಾಡಬೇಕು.

    2. ಕರ್ನಾಟಕವು ತಕ್ಷಣವೇ ಕೊರತೆಯ ಪ್ರಮಾಣವನ್ನು ಬಿಡುಗಡೆ ಮಾಡಬೇಕು ಮತ್ತು ಸಂಕಷ್ಟದ ಅನುಪಾತಕ್ಕೆ ಅನುಗುಣವಾಗಿ ಮತ್ತಷ್ಟು ಹರಿವುಗಳನ್ನು ಬಿಡುಗಡೆ ಮಾಡಬೇಕು.

    ಅಂತಿಮವಾಗಿ CWRC, ಕರ್ನಾಟಕವು ಬಿಳಿಗುಂಡ್ಲುವಿನಲ್ಲಿ ಸೆ. 28 ರಂದು ಬೆಳಿಗ್ಗೆ 8 ಗಂಟೆಯಿಂದ ಅ.15ರವರೆಗೆ 3000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಕಾವೇರಿ ನದಿ ನೀರು ನಿಯಂತ್ರಣ ಪ್ರಾಧಿಕಾರ (CWMA)ಕ್ಕೆ ಶಿಫಾರಸು ಮಾಡಿದೆ.

    ಸುಪ್ರೀಂಕೋರ್ಟ್​ ಆದೇಶ

    ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಕರ್ನಾಟಕ ಮೇಲ್ಮನವಿ ಸಲ್ಲಿಸಿತ್ತು. ಸೆ.21ರಂದು ತೀರ್ಪು ಪ್ರಕಟಿಸಿದ ನ್ಯಾಯಾಲಯ,CWMA ಆದೇಶವನ್ನು ಎತ್ತಿಹಿಡಿದಿತ್ತು. ಇದೀಗ ಮತ್ತೆ 3000 ಸಾವಿರ ಕ್ಯೂಸೆಕ್​ ನೀರು ಹರಿಸಲು ಕಾವೇರಿ ನದಿ ನೀರು ಸಮಿತಿ ಶಿಫಾರಸು ಮಾಡಿರುವುದರಿಂದ ಕಾವೇರಿ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

    CWRC ಆದೇಶದಂತೆ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು CWMA ಸಭೆಯಲ್ಲಿ ಕರ್ನಾಟಕಕ್ಕೆ ಸೂಚನೆ

    ಕರ್ನಾಟಕಕ್ಕೆ ಸುಪ್ರೀಂ ಶಾಕ್​: 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸಲು ಆದೇಶ

    ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ವಾದಕ್ಕೂ ಹಿನ್ನಡೆ

    ರಾಜ್ಯೋತ್ಸವ ರಸಪ್ರಶ್ನೆ - 21

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts