ಕಾವೇರಿ 2.0 ತಂತ್ರಾಂಶದ ಮೇಲೆ ಸೈಬರ್ ದಾಳಿ ತನಿಖೆ: ಸಚಿವ ಕೃಷ್ಣ ಬೈರೇಗೌಡ | IT system security audit

blank

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಸ್ತಿ ನೋಂದಣಿಗೆ ಸಂಬಂಧಿಸಿದ 2.0 ತಂತ್ರಾಂಶ ವ್ಯವಸ್ಥೆಯಲ್ಲಿನ ಇತ್ತೀಚಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಕ್ರಮವಹಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಆಸ್ತಿ ನೋಂದಣಿ ಪ್ರಕ್ರಿಯೆಗಳನ್ನು ಅಡ್ಡಿಪಡಿಸಲು ನಮ್ಮ ಐಟಿ ವ್ಯವಸ್ಥೆಯ ಮೇಲೆ ಉದ್ದೇಶಪೂರ್ವಕ ದಾಳಿ ನಡೆದಿದ್ದರೆ ಅಂತಹ ದಾಳಿಕೋರ ವ್ಯಕ್ತಿ/ ಸಂಸ್ಥೆಗಳು ಯಾರು ಎಂಬುದನ್ನು ತನಿಖೆ ನಡೆಸಲು ಈಗಾಗಲೇ ಎ್ಐಆರ್ ದಾಖಲಿಸಲಾಗಿದೆ.

ಭವಿಷ್ಯದಲ್ಲಿ ಇಂತಹ ದಾಳಿಗಳನ್ನು ತಡೆಯಲು ತನಿಖೆಯು ಸಹಕಾರಿಯಾಗಲಿದೆ. ಇಲಾಖೆಯ ಐಟಿ ವ್ಯವಸ್ಥೆ ಭದ್ರತಾ ಲೆಕ್ಕಪರಿಶೋಧನೆಯನ್ನು ಸ್ವತಂತ್ರವಾಗಿ ನಮ್ಮ ತಜ್ಞರಿಂದಲೇ ನಡೆಸುತ್ತೇವೆ. ಇದು ಐಟಿ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ ಎಂದು ಕೃಷ್ಣಬೈರೇಗೌಡ ಹೇಳಿದ್ದಾರೆ.

ಕಳೆದ ಎರಡು ತಿಂಗಳಿಂದ ಸರ್ವರ್ ಡೌನ್ ಸಮಸ್ಯೆಯಿಂದ ಆಸ್ತಿ ನೋಂದಣಿ ವಹಿವಾಟಿನ ಮೇಲೆ ಅಡ್ಡ ಪರಿಣಾಮಬೀರಿತ್ತು. ಕಾವೇರಿ 2.0 ತಂತ್ರಾಂಶದ ಮೇಲೆ ಸೈಬರ್ ದಾಳಿಯಿಂದಾಗಿ ೆಬ್ರವರಿ ಮೊದಲ ವಾರದಿಂದ ಆಸ್ತಿ ನೋಂದಣಿ ವ್ಯತ್ಯಯವಾಗಿತ್ತು.

ಇದರಿಂದಾಗಿ ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಜನರ ಅಲೆದಾಟ, ಅಧಿಕಾರಿಗಳಿಗೆ ಹೆಚ್ಚಿದ ಒತ್ತಡ, ಸರ್ಕಾರದ ಖಜಾನೆಗೆ ಆದಾಯ ಕೂಡ ಖೋತಾ ಆಯಿತು. ನಿರಂತರ ಪರಿಶ್ರಮದಿಂದ ಈ ಸಮಸ್ಯೆ ಬಗೆಹರಿಸಲಾಗಿದ್ದು, ಕಾವೇರಿ 2.0 ತಂತ್ರಾಂಶವು ಸೋಮವಾರದಿಂದ ಎಂದಿನಂತೆ ಕಾರ್ಯನಿರ್ವಹಣೆ ಆರಂಭಿಸಿದ್ದನ್ನು ಉಲ್ಲೇಖಿಸಬಹುದು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…