More

    ಸೈಬರ್ ಅಪರಾಧ ತಡೆಗೆ ಎಚ್ಚರ ವಹಿಸಿ

    ಹಿರಿಯೂರು: ವಿದ್ಯಾರ್ಥಿಗಳು ದೇಶದ ಶಕ್ತಿ. ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಮೊಬೈಲ್ ಗೀಳು, ದುಶ್ಚಟಗಳಿಗಳಿಗೆ ಬಲಿಯಾಗದೇ ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಸೈಬರ್ ಕ್ರೈಂ ಪೊಲೀಸ್ ಅಧಿಕಾರಿ ಜೈರಾಂ ಹೇಳಿದರು.

    ನಗರದ ಡಾ.ಬಿ.ಆರ್.ಅಂಬೇಡ್ಕರ್ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಚಿತ್ರದುರ್ಗ ಜಿಲ್ಲಾ ಪೊಲೀಸ್ ಸೈಬರ್ ಕ್ರೈಂ ಠಾಣೆ ಆಯೋಜಿಸಿದ್ದ ಮಾದಕ ವಸ್ತುಗಳ ಹಾಗೂ ಸೈಬರ್ ಅಪರಾಧಗಳ ಕಾನೂನು ತಿಳಿವಳಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇಂದು ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದ್ದು, ಓದುವ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಮೊಬೈಲ್‌ನಿಂದ ಹೆಚ್ಚು ವಂಚನೆಗಳಿಗೆ ಗುರಿಯಾಗುತ್ತಿದ್ದಾರೆ. ಆದ್ದರಿಂದ ಆನ್‌ಲೈನ್ ವಂಚನೆ ಬಗ್ಗೆ ಎಚ್ಚರ ವಹಿಸಬೇಕು. ಅಲ್ಲದೇ ಯಾವುದೇ ಸಂಶಯ ಬಂದಲ್ಲಿ ಬ್ಯಾಂಕ್ ಹಾಗೂ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

    ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ, ಉಪನ್ಯಾಸಕರಾದ ಕೆ.ರಂಗಪ್ಪ, ಈ.ನಾಗೇಂದ್ರಪ್ಪ, ಎಚ್.ಆರ್.ಲೋಕೇಶ್, ಎಲ್.ಶಾಂತಕುಮಾರ್, ಈ.ಪ್ರಕಾಶ್, ರಜಾಕ್‌ಸಾಬ್, ಜಯಪ್ರಕಾಶ್, ಪ್ರೇಮಾನಂದ ಗೌತಮ್, ಬಿ.ಎಂ.ತಿಪ್ಪೇಸ್ವಾಮಿ, ವೆಂಕಟೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts