16 C
Bangalore
Thursday, December 12, 2019

ಮಹಿಳಾ ಸಬಲೀಕರಣಕ್ಕಾಗಿ ಸೈಕಲ್ ಜಾಥಾ

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಶಿಗ್ಗಾಂವಿ: ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹಿಳಾ ಪಾತ್ರ ಮುಖ್ಯವಾಗಿದ್ದು, ಮಹಿಳೆಯರ ಸಬಲೀಕರಣದಿಂದ ದೌರ್ಜನ್ಯ, ಶೋಷಣೆ ಹಾಗೂ ಬಾಲ್ಯ ವಿವಾಹ ತಡೆಯಲು ಸಾಧ್ಯ ಎಂದು ರಾಜ್ಯ ಮೀಸಲು ಪೊಲೀಸ್ ಅಪರ ಆರಕ್ಷಕ ಮಹಾನಿರ್ದೇಶಕ ಭಾಸ್ಕರ್​ರಾವ್ ಹೇಳಿದರು.

ಬೆಳಗಾವಿಯಿಂದ ಬೆಂಗಳೂರಿನವರೆಗೆ ನಡೆದ ಮಹಿಳಾ ಸಬಲೀಕರಣಕ್ಕಾಗಿ ಸೈಕಲ್ ನಡಿಗೆ ಜಾಥಾ ತಂಡದ ವತಿಯಿಂದ ತಾಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣ ಮಾತಿನಲ್ಲಿ, ವೇದಿಕೆಯಲ್ಲಿ ಚರ್ಚೆಯಾಗಬಾರದು. ಅದು ಕಾರ್ಯಗತಕ್ಕೆ ಬರಬೇಕು ಎಂಬ ಮುಖ್ಯ ಉದ್ದೇಶದಿಂದ ಸಣ್ಣ ಪ್ರಯತ್ನ ಮಾಡಲಾಗಿದೆ. ಇಲಾಖೆಯಿಂದ ಆರಂಭವಾದ ಮಹಿಳಾ ಸಬಲೀಕರಣ ಇಡೀ ಮಹಿಳಾ ಸಮಾಜಕ್ಕೆ ತಲುಪಬೇಕು. ಮಹಿಳೆಯರು ಧೈರ್ಯ, ಸಾಹಸದಿಂದ ನಡೆಯಬೇಕು ಎಂಬುದು ಮುಖ್ಯ ಗುರಿಯಾಗಿದೆ ಎಂದರು.

ಕೆಎಸ್​ಆರ್​ಪಿ ಪಡೆಗಳಲ್ಲಿ ಮಹಿಳಾ ಪೊಲೀಸ್ ಕಾನ್​ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ಮತ್ತು ಬೆಳಗಾವಿ ಕೆಎಸ್​ಆರ್​ಪಿ ಪಡೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. ಸುಮಾರು 185 ಮಹಿಳಾ ಕಾನಸ್ಟೇಬಲ್​ಗಳನ್ನು ಈವರೆಗೆ ನೇಮಕಾತಿ ಮಾಡಲಾಗಿದೆ. ಅದರಲ್ಲಿ ಸುಮಾರು 55 ಜನ ಮಹಿಳಾ ಕಾನ್​ಸ್ಟೇಬಲ್​ಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಮಹಿಳಾ ಅಧಿಕಾರಿಗಳು ಸೇರಿ ಒಟ್ಟು 85 ಜನರು ಈ ಜಾಥಾದಲ್ಲಿದ್ದಾರೆ ಎಂದರು.

ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ಬಿ. ನಾಯಕ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಹಮ್ಮಿಕೊಂಡ ಸೈಕಲ್ ಜಾಥಾ ಅರ್ಥಪೂರ್ಣವಾಗಿದ್ದು, ಅದಕ್ಕೆ ಪ್ರತಿಯೊಬ್ಬರ ಬೆಂಬಲ ಮುಖ್ಯವಾಗಿದೆ ಎಂದರು.

ಬೆಳಗಾವಿ ಕೆಎಸ್​ಆರ್​ಪಿ ಮಹಿಳಾ ಪಿಎಸ್​ಐ ಸೌಮ್ಯಾ ಮಾತನಾಡಿದರು. ರಾಜ್ಯ ಮೀಸಲು ಪೊಲೀಸ್ ಅಪರ ಆರಕ್ಷಕ ಮಹಾನಿರ್ದೇಶಕ ಭಾಸ್ಕರ್​ರಾವ್ ಅವರ ಪತ್ನಿ ಡಾ. ಚಂದ್ರಕಲಾರಾವ್, ಐಎಎಸ್ ಅಧಿಕಾರಿ ನಂದಿನಿ ಕೆ.ಆರ್, ಬೆಂಗಳೂರು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿ ಶ್ರುತಿ, ಗಂಗೀಬಾವಿ ಕೆಎಸ್​ಆರ್​ಪಿ 10ನೇ ಪಡೆ ಕಮಾಂಡಂಟ್ ಎಂ.ಬಿ. ಪ್ರಸಾದ, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ, ಸಹಾಯಕ ವರಿಷ್ಠಾಧಿಕಾರಿ ಜಗದೀಶ, ಡಿವೈಎಸ್​ಪಿ ಲಕ್ಷ್ಮಣ ಶಿರಕೋಳ ಮತ್ತಿತರರು ಇದ್ದರು.

ಬೆಂಗಳೂರಿನಲ್ಲಿ ಸಮಾವೇಶ 9ರಂದು

ಹಾವೇರಿ: ಬೆಳಗಾವಿಯಿಂದ ಬೆಂಗಳೂರಿಗೆ ಕೈಗೊಂಡಿರುವ ಮಹಿಳಾ ಪೊಲೀಸ್ ಯಾತ್ರೆ ಡಿ. 9ರಂದು ಬೆಂಗಳೂರಿನಲ್ಲಿ ಸಮಾವೇಶಗೊಳ್ಳಲಿದೆ ಎಂದು ರಾಜ್ಯ ಮೀಸಲು ಪೊಲೀಸ್ ಪಡೆಯ ಅಪರ ಆರಕ್ಷಕ ಮಹಾನಿರ್ದೇಶಕ ಭಾಸ್ಕರರಾವ್ ತಿಳಿಸಿದರು.

ನಗರದ ಶಿವಶಕ್ತಿ ಪ್ಯಾಲೇಸ್​ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಬಲೀಕರಣ ಮಹಿಳೆ ಮತ್ತು ಆರೋಗ್ಯ, ಮಹಿಳೆ ಮತ್ತು ಕ್ರೀಡೆ, ಮಹಿಳೆ ಮತ್ತು ನಗರ ಪರಿಸರ, ಮಹಿಳಾ ಮತ್ತು ಪ್ರವಾಸೋದ್ಯಮ ಹಾಗೂ ಹೆಣ್ಣು ಮಗುವಿನ ರಕ್ಷಣೆಯ ಸಂದೇಶದ ಜೊತೆಗೆ ಪೊಲೀಸ್ ಮೀಸಲು ಪಡೆಯ ಮಹಿಳಾ ಪೇದೆ, ಮಹಿಳಾ ಅಧಿಕಾರಿಗಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಬೆಳಗಾವಿಯಿಂದ ಬೆಂಗಳೂರಿನವರೆಗೆ 540 ಕಿಮೀ ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಡಿ. 5ರಂದು ಬೆಳಗಾವಿಯಿಂದ ಯಾತ್ರೆ ಹೊರಟು ಗುರುವಾರ ಹಾವೇರಿ ತಲುಪಿದೆ. ಡಿ. 9ರಂದು ಬೆಂಗಳೂರು ತಲುಪಲಿದೆ ಎಂದರು.

ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಆದರೆ ರಾಜ್ಯ ಪೊಲೀಸ್ ಮೀಸಲು ಪಡೆಯ ಮಹಿಳೆಯರು ಯಾವುದೇ ನೆರವಿಲ್ಲದೇ ಸ್ವಸಾಮರ್ಥ್ಯದಿಂದ ಸಬಲೀಕರಣಕ್ಕೆ ತೊಡಗಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಸೈಕಲ್​ನಲ್ಲಿ ಸಂಚರಿಸುತ್ತ ಸಂದೇಶವನ್ನು ಸಾರುತ್ತಾ ಹೊರಟಿದ್ದಾರೆ. ದಾರಿಯುದ್ದಕ್ಕೂ ಸಿಗುವ ಅಂಗನವಾಡಿ, ಶಾಲಾ-ಕಾಲೇಜ್, ಮಹಿಳಾ ಸಂಘಟನೆಗಳನ್ನು ಭೇಟಿ ಮಾಡಿ ಅಲ್ಪಾವಧಿಯ ಸಂವಾದ ನಡೆಸಿ ಮಾಹಿತಿ ಪಡೆದು ಸಾಗುತ್ತಿದ್ದಾರೆ. ಸಮಾಜದಲ್ಲಿ ಜಾಗೃತಿಯ ಜೊತೆಗೆ ತಮ್ಮ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಳ್ಳುವ ಜನಸಾಮಾನ್ಯರ ಸಮಸ್ಯೆಗಳನ್ನು ಅರಿಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ಮಹಿಳೆಯರ ಸಂರಕ್ಷಣೆಗಾಗಿ ಸ್ವರ: ಮಹಿಳೆಯರ ಸಂರಕ್ಷಣೆಗಾಗಿ ಸ್ವರ ಕಾರ್ಯಕ್ರಮವನ್ನು ಶೀಘ್ರವೇ ಜಾರಿಗೆ ತರಲಾಗುವುದು. ಮೀಸಲು ಪಡೆಯ ಮಹಿಳಾ ಪೇದೆಗಳಿಗೆ ಸ್ವ ರಕ್ಷಣೆಯ ತರಬೇತಿ ನೀಡಿ ಮಾಸ್ಟರ್ ಟ್ರೈನರ್​ರಾಗಿ ರೂಪಿಸಲಾಗುವುದು. ತರಬೇತಿ ಪಡೆದ ಪ್ರತಿ ಮಹಿಳಾ ಪೇದೆಗೆ 10 ಶಾಲೆಗಳನ್ನು ದತ್ತು ನೀಡಿ ವಿದ್ಯಾರ್ಥಿನಿಯರಿಗೆ ಸ್ವ ರಕ್ಷಣೆಯ ಕುರಿತಂತೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗುವುದು ಎಂದು ಭಾಸ್ಕರರಾವ್ ತಿಳಿಸಿದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...