More

    ಸೈಕ್ಲಿಂಗ್ ಚಾಂಪಿಯನ್​ಶಿಪ್ ಲೋಗೋ ಬಿಡುಗಡೆ

    ಗದಗ: ತಾಲೂಕಿನ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಫೆ. 18ರಿಂದ ಫೆ. 21ರ ವರೆಗೆ ಆಯೋಜಿಸಿರುವ 17ನೇ ರಾಷ್ಟ್ರೀಯ ಮೌಂಟೇನ್ ಬೈಕ್ ಸೀನಿಯರ್, ಜೂನಿಯರ್ ಮತ್ತು ಸಬ್ ಜೂನಿಯರ್ ಸೈಕ್ಲಿಂಗ್ ಚಾಂಪಿಯನ್​ಶಿಪ್ ಸ್ಪರ್ಧೆಯ ರೈಡ್ ಸೈಕಲ್ ಸ್ಟೇ ಹೆಲ್ದಿ ಎಂಬ ಸಂದೇಶವುಳ್ಳ ಲಾಂಛನವನ್ನು (ಲೋಗೋ) ಸಚಿವ ಸಿ.ಸಿ.ಪಾಟೀಲ ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಭಾನುವಾರ ಲೋಕಾರ್ಪಣೆಗೊಳಿಸಿದರು.

    ಈ ವೇಳೆ ಮಾತನಾಡಿದ ಅವರು, ‘17ನೇ ರಾಷ್ಟೀಯ ಮೌಂಟೇನ್ ಸಿನಿಯರ್, ಜೂನಿಯರ್ ಮತ್ತು ಸಬ್ ಜೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್​ಶಿಪ್ ಸ್ಪರ್ಧೆಯನ್ನು ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ರಾಜ್ಯ ಸೈಕ್ಲಿಂಗ್ ಸಂಸ್ಥೆ, ಜಿಲ್ಲಾ ಸೈಕ್ಲಿಂಗ್ ಸಂಸ್ಥೆ ಆಶ್ರಯದಲ್ಲಿ ಆಯೋಜಿಸಲಾಗಿದೆ’ ಎಂದರು.

    ರಾಷ್ಟ್ರೀಯ ಸ್ಪರ್ಧೆಯನ್ನು ಗದಗ ಜಿಲ್ಲೆಯಲ್ಲಿ ನಡೆಸುತ್ತಿರುವುದು ಹೆಮ್ಮೆಯ ಸಂಗತಿ. ಫೆ. 18ರಂದು ಬೆಳಗ್ಗೆ 8ಕ್ಕೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸೈಕಲ್ ಜಾಥಾ ಆರಂಭವಾಗಿ ಅಸುಂಡಿಯ ಕುವೆಂಪು ಮಾದರಿ ಶಾಲೆಯಲ್ಲಿ ಮುಕ್ತಾಯಗೊಳ್ಳಲಿದೆ. ಅದೇ ದಿನ ಸಂಜೆ 5 ಗಂಟೆಗೆ ನಗರದ ಕಳಸಾಪೂರ ರಸ್ತೆಯ ಒಳಕ್ರೀಡಾಂಣಗದಲ್ಲಿ ಉದ್ಘಾಟನೆ ನೆರವೇರಲಿದೆ. ಫೆ. 19 ರಿಂದ ಫೆ. 21ರ ವರೆಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಬಿಂಕದಕಟ್ಟೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಸೈಕ್ಲಿಂಗ್ ಸ್ಪರ್ದೆಗಳು ನಡೆಯಲಿವೆ ಎಂದರು.

    ದೇಶದ 26 ರಾಜ್ಯಗಳಿಂದ 400 ರಿಂದ 600 ಜನ ಕ್ರೀಡಾಪಟುಗಳು ಆಗಮಿಸುತ್ತಿದ್ದು, ರಾಜ್ಯದಿಂದ 38 ಜನ ಹಾಗೂ ಜಿಲ್ಲೆಯ 7 ಜನ ಕ್ರೀಡಾಪಟುಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

    ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೈಕ್ಲಿಂಗ್ ಸ್ಪರ್ಧೆ ಆಯೋಜನೆ ಬಗ್ಗೆ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಸ್ಪರ್ಧಿಗಳಿಗೆ ಊಟೋಪಚಾರ, ವಸತಿ, ಸಾರಿಗೆ ವ್ಯವಸ್ಥೆಯಲ್ಲಿ ಕೊರತೆಯುಂಟಾಗದಂತೆ ಜವಾಬ್ದಾರಿಯನ್ನು ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದೆ. ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಸ್ಪರ್ಧೆಯನ್ನು ಯಶಸ್ವಿಗೊಳಿಸಬೇಕು ಎಂದರು.

    ಜಿಲ್ಲೆಯ ಕ್ರೀಡಾಶಾಲೆಯ ವಿದ್ಯಾರ್ಥಿಗಳಾದ ಹನುಮಂತ ಮಾರನೂರ, ಅಭಿಷೇಕ ಹಿರೇಕುರುಬರ, ಪವಿತ್ರಾ ಕುರ್ತಕೋಟಿ, ಅಂಜಲಿ ಹರಿಜನ, ಗಾಯತ್ರಿ ಕಿತ್ತೂರ ಅವರು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು. ಶಾಸಕ ಕಳಕಪ್ಪ ಬಂಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾಧಿಕಾರಿ ಸುಂದರೇಶಬಾಬು, ಅಪರ ಜಿಲ್ಲಾಧಿಕಾರಿ ಸತೀಶ ಕುಮಾರ ಎಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಬಿ.ವಿಶ್ವನಾಥ ಹಾಗೂ ರಾಜ್ಯ, ಜಿಲ್ಲಾ ಸೈಕ್ಲಿಂಗ್ ಸಂಸ್ಥೆಯ ಪದಾಧಿಕಾರಿಗಳು ಇದ್ದರು.



    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts