More

    ಸೈಕ್ಲೋನ್ ಎಫೆಕ್ಟ್​: ಕರಾವಳಿ-ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಅಸನಿ ಚಂಡಮಾರುತದಿಂದ ರಾಜ್ಯದಲ್ಲಿ ಮುಂದಿನ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

    ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಮತ್ತು ಹಾಸನದಲ್ಲಿ ಮಾ. 21ರಿಂದ ಮಾ.23ರವರೆಗೆ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ಮುಂದಿನ 72 ಗಂಟೆ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಮಳೆಯಾಗಲಿದೆ.

    ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಮಧ್ಯಾಹ್ನದವರೆಗೆ ಬಿಸಿಲು ಜತೆಗೆ ಮೋಡಕವಿದ ವಾತಾವರಣವಿತ್ತು. ಸಂಜೆ ವೇಳೆ ಕೆಲವೆಡೆ ಭರ್ಜರಿ ಮಳೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದೆ.

    ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಮಳೆ; ಎಷ್ಟು ದಿನ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts