ಅಸನಿ ಚಂಡಮಾರುತ ಎಫೆಕ್ಟ್​: ವಿಮಾನ ಹಾರಾಟ ಸ್ಥಗಿತ

ನವದೆಹಲಿ: ಚಂಡಮಾರುತದಿಂದಾಗುವ ಅನಾಹುತ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪೂರ್ವ ಕರಾವಳಿಯಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆಂದ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಇಂದು ರಾತ್ರಿ ಚಂಮಾಡುತ ಬಂದಪ್ಪಳಿಸುವುದರಿಂದ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ವಿಶಾಖಪಟ್ಟಣಂ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಯಾವುದೇ ವಿಮಾನ ಸಂಚಾರ ನಡೆಸಿಲ್ಲ, 23 ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ. ಇದರಲ್ಲಿ ನಾಲ್ಕು ಏರ್​ ಏಶಿಯಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. … Continue reading ಅಸನಿ ಚಂಡಮಾರುತ ಎಫೆಕ್ಟ್​: ವಿಮಾನ ಹಾರಾಟ ಸ್ಥಗಿತ