More

    ಅಬ್ಬರಿಸಿದ ಚಂಡಮಾರುತ: ಐವರು ಮೃತ್ಯು- 500 ಮಂದಿಗೆ ಗಾಯ

    ಕೊಲ್ಕತ್ತಾ: ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಆಸ್ತಿ -ಪಾಸ್ತಿಗೆ ನಷ್ಟ ಉಂಟಾಗಿದೆ.

    ಇದನ್ನೂ ಓದಿ:‘ಶ್ರೀರಾಮನ ಸಂದೇಶ ಅರಿಯಿರಿ’ ಪ್ರಧಾನಿ ಮೋದಿಯವರಿಗೆ ಪ್ರಿಯಾಂಕಾ ಗಾಂಧಿ ಸಲಹೆ.. 

    ಚಂಡಮಾರುತವು ಮುಖ್ಯವಾಗಿ ಜಲ್ಪೈಗುರಿ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭಾರಿ ನಷ್ಟವನ್ನುಂಟು ಮಾಡಿದೆ.

    ಚಂಡಮಾರುತದ ರಭಸಕ್ಕೆ ಮೈನಗುರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾರ ಹಾನಿಯಾಗಿದೆ. ಈ ಚಂಡಮಾರುತಕ್ಕೆ ಹಲವು ಮನೆಗಳು ನೆಲಸಮವಾಗಿವೆ. ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ರಾಜರಹತ್, ಬರ್ನಿಷ್, ಬಕಾಲಿ, ಜೋರ್ಪಕ್ಡಿ, ಮಧಬ್ದಂಗ ಮತ್ತು ಸಪ್ತಿಬರಿ ಪ್ರದೇಶಗಳಲ್ಲಿಯೂ ಹೆಚ್ಚಿನ ಹಾನಿ ಸಂಭವಿಸಿದೆ. ಇದುವರೆಗೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 500 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ.

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ಭಾನುವಾರ ಸಂಜೆ ಎರಡ್ಮೂರು ನಿಮಿಷದಲ್ಲಿ ಬೀಸಿದ ಬಿರುಗಾಳಿಗೆ ಸಾಕಷ್ಟು ಹಾನಿಯಾಗಿದೆ. ಇಲ್ಲಿಯವರೆಗೆ ಐದು ಜನರು ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಂತ್ರಸ್ತರ ಪರ ಸರ್ಕಾರ ನಿಲ್ಲಲಿದೆ. ಮೃತರ ಕುಟುಂಬ ಸದಸ್ಯರಿಗೆ ಹಾಗೂ ಗಾಯಾಳುಗಳಿಗೆ ನಿಯಮಾನುಸಾರ ಜಿಲ್ಲಾಡಳಿತ ಪರಿಹಾರ ನೀಡಲಿದೆ ಎಂದರು.

    ಬಿರುಗಾಳಿ ಜತೆ ಬಿರುಸಿನ ಮಳೆಯಾದ ಕೆಲವೇ ಗಂಟೆಗಳಲ್ಲಿ ಸಿಎಂ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿದರು. ಸಂಕಷ್ಟದ ಪರಿಸ್ಥಿತಿ ಎದುರಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಇದಲ್ಲದೆ, ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಪರಿಹಾರ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಿದರು.

    ಹನುಮಾನ್ ಸೀಕ್ವೆಲ್ ಕುರಿತು ಪ್ರಶಾಂತ್ ವರ್ಮಾ ಆಸಕ್ತಿದಾಯಕ ಅಪ್‌ಡೇಟ್..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts