ಸೈಕ್ಲೋನ್ ಎಫೆಕ್ಟ್: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ‘ಮೈಚಾಂಗ್’ ಚಂಡಮಾರುತ ಪರಿಣಾಮದಿಂದ ಸೋಮವಾರ ವಿಮಾನಗಳ ಹಾರಾಟದಲ್ಲಿ ಹಾಗೂ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಮೈಸೂರು, ಬೆಂಗಳೂರು ರೈಲು ನಿಲ್ದಾಣದಿಂದ ಚೆನ್ನೈ ರೈಲು ನಿಲ್ದಾಣಕ್ಕೆ ತೆರಳಬೇಕಿದ್ದ 10ಕ್ಕೂ ಅಧಿಕ ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ಇಲಾಖೆ ರದ್ದುಪಡಿಸಿದೆ.ಚೆನ್ನೈ ರೈಲು ನಿಲ್ದಾಣಕ್ಕೆ ಮಳೆ ನೀರು ನುಗ್ಗಿದೆ. ಹಲವು ರೈಲು ಮಾರ್ಗದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ, ಸೋಮವಾರ ಹೊರಡಬೇಕಿದ್ದ ರೈಲುಗಳನ್ನು ಸಂಚಾರವನ್ನು ರದ್ದುಪಡಿಸಲಾಗಿದ್ದು,ಪ್ರಯಾಣಿಕರು ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ. ಅಲ್ಲದೆ, ತಮಿಳುನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ … Continue reading ಸೈಕ್ಲೋನ್ ಎಫೆಕ್ಟ್: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ವ್ಯತ್ಯಯ