ಸೈಕ್ಲೋನ್​ ಎಫೆಕ್ಟ್​; ರಾಜ್ಯದಲ್ಲಿ ಮೇ 8ರಿಂದ ಮಳೆ ಚುರುಕು

rain
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 8ರಿಂದ ಚುರುಕು ಪಡೆಯಲಿದೆ. ಶುಕ್ರವಾರ ಬಳ್ಳಾರಿ ಜಿಲ್ಲೆಯ ಹಗರಿ, ತುಮಕೂರಿನ ಮಿಡಿಗೇಶಿ, ಕಲಬುರಗಿಯ ಚಿತ್ತಾಪುರ, ಬೆಂಗಳೂರು ನಗರದ ಜ್ಞಾನಭಾರತಿ ವಿವಿ ಕ್ಯಾಂಪಸ್, ಬಳ್ಳಾರಿಯ ಕುರುಗೋಡು, ಕೋಲಾರ ಹಾಗೂ ರಾಮನಗರ ಸೇರಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಬಿದ್ದಿದೆ.

ಚಂಡಮಾರುತ ಪರಿಣಾಮದಿಂದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರದಲ್ಲಿ ಮೇ 8 ಮತ್ತು ಮೇ 9ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.

ಮೇ 8ರಿಂದ ಮಳೆ ಚುರುಕು

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮೇ 8ರಂದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಸುತ್ತಮುತ್ತ ಪ್ರದೇಶಗಳು, ತಮಿಳುನಾಡು, ಪುದುಚೇರಿ, ಆಂಧ್ರಪ್ರದೇಶ, ರಾಯಲಸೀಮಾ ಹಾಗೂ ಕರ್ನಾಟಕದಲ್ಲಿ ಭರ್ಜರಿ ವರ್ಷಧಾರೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ( ಐಎಂಡಿ) ಮುನ್ಸೂಚನೆ ಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net