More

    ಚಂಡಮಾರುತ ಪರಿಣಾಮ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್..

    ಬೆಂಗಳೂರು: ಅಸನಿ ಚಂಡಮಾರುತ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ಮೂರ್ನಾಲ್ಕು ದಿನ ಮುಂದುವರಿಯಲಿದೆ. ಸೋಮವಾರವೂ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗಿದ್ದು, ಚಾಮರಾಜನಗರದ ಹರದನಹಳ್ಳಿಯಲ್ಲಿ 19 ಮಿಮೀ ಮತ್ತು ಕೊಪ್ಪಳದ ಮುನಿರ್‌ಬಾದ್‌ನಲ್ಲಿ 15 ಮಿಮೀ ಮಳೆ ಸುರಿದಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 10ರಂದು ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

    ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಶಾದ ಪುರಿಯತ್ತ ಚಂಡಮಾರುತ ಚಲಿಸುತ್ತಿದ್ದು, ಮೇ 10ರಿಂದ ಮೇ 12ರವರೆಗೆ ಈ ಭಾಗಗಳಲ್ಲಿ ಭಾರಿ ಮಳೆ ಬೀಳಲಿದೆ. ಗಂಟೆಗೆ 110-100 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಎತ್ತರದ ಅಲೆಗಳು ಎಳೆಯುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ಅಕ್ಕಪಕ್ಕದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ.

    ಒಂದು ಮುತ್ತಿನ ಕಥೆ: ಮದುವೆಯಂತೂ ತ್ವರಿತ, ಅದು ಬಿಂದುವಲ್ಲ ಹರಿತ!; ಖ್ಯಾತ ನಟನ ಸ್ಪಷ್ಟೀಕರಣ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts