ಗಜ ಚಂಡಮಾರುತದ ಹಾನಿ ಪರಿಹಾರವಾಗಿ 15 ಸಾವಿರ ಕೋಟಿ ರೂ. ನೆರವು ನೀಡುವಂತೆ ಮನವಿ ಮಾಡಿದ ತಮಿಳುನಾಡು

ನವದೆಹಲಿ: ಗಜ ಚಂಡಮಾರುತದಿಂದ ಹಾನಿಗೀಡಾಗಿರುವ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 15 ಸಾವಿರ ಕೋಟಿ ರೂ.ಗಳ ನೆರವು ನೀಡುವಂತೆ ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಗುರುವಾರ ಮನವಿ ಮಾಡಿದೆ.

ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಈ ಕುರಿತು ಮನವಿ ಸಲ್ಲಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಗಜ ಚಂಡಮಾರುತವು ತಮಿಳುನಾಡಿನಲ್ಲಿ ದೊಡ್ಡ ಪ್ರಮಾಣದ ಹಾನಿ ಸೃಷ್ಟಿಸಿದೆ. ಗಜದಿಂದಾದ ವಿನಾಶದ ಬಗ್ಗೆ ಪ್ರಧಾನಿ ಅವರನ್ನು ಭೇಟಿ ಮಾಡಿ ವಿವರ ನೀಡಿದ್ದೇನೆ. ಜ್ಞಾಪನ ಪತ್ರವನ್ನೂ ಸಲ್ಲಿಸಿದ್ದೇನೆ. ಕೇಂದ್ರ ಸರ್ಕಾರದಿಂದ 15 ಸಾವಿರ ಕೋಟಿ ಪರಿಹಾರವನ್ನು ಕೇಳಿದ್ದೇವೆ. ಮಧ್ಯಂತರ ಪರಿಹಾರವಾಗಿ 1,500 ಕೋಟಿ ನೀಡುವಂತೆ ಕೋರಿದ್ದೇವೆ’ ಎಂದು ತಿಳಿಸಿದರು.