More

    ಮೈಚಾಂಗ್​​ ಚಂಡಮಾರುತ ಎಫೆಕ್ಟ್​; ಚೆನ್ನೈನಲ್ಲಿ ಇಳಿಯಬೇಕಿದ್ದ 11 ವಿಮಾನಗಳು ಬೆಂಗಳೂರು ಏರ್‌ಪೋರ್ಟ್‌ಗೆ

    ಬೆಂಗಳೂರು:  ಮೈಚಾಂಗ್​​ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆ ಆಗುತ್ತಿದ್ದು, ಡಿಸೆಂಬರ್ 4, ಸೋಮವಾರದಂದು ಸುಮಾರು 11 ವಿಮಾನಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ತಿರುಗಿಸಲಾಗಿದೆ.

    ಚೆನ್ನೈನಲ್ಲಿ ಇಳಿಯಬೇಕಿದ್ದ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳನ್ನು ಕೆಐಎಗೆ ತಿರುಗಿಸಲಾಗಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಬಿಐಎಎಲ್) ಅಧಿಕಾರಿಗಳು ತಿಳಿಸಿದ್ದಾರೆ.

    ಇಂಡಿಗೋ, ಸ್ಪೈಸ್‌ಜೆಟ್, ಇತಿಹಾದ್, ಗಲ್ಫ್ ಏರ್, ಫ್ಲೈ ದುಬೈ, ಏರ್ ಇಂಡಿಯಾ, ಲುಫ್ತಾನ್ಸಾ ಮತ್ತು ಬ್ರಿಟಿಷ್ ಏರ್‌ವೇಸ್‌ಗೆ ಸೇರಿದ ವಿಮಾನಗಳನ್ನು ಚೆನ್ನೈನಿಂದ ಬೆಂಗಳೂರಿಗೆ ತಿರುಗಿಸಲಾಗಿದೆ. ಇಲ್ಲಿಯವರೆಗೆ 10 ವಿಮಾನಗಳು ಕೆಐಎಗೆ ಬಂದಿಳಿದಿವೆ ಮತ್ತು ಇನ್ನೊಂದು ಮಾರ್ಗದಲ್ಲಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಹೆಚ್ಚಿನ ವಿಮಾನಗಳನ್ನು ಕೆಐಎಗೆ ತಿರುಗಿಸುವ ನಿರೀಕ್ಷೆಯಿದೆ ಎಂದು  ಬಿಐಎಎಲ್ ಅಧಿಕಾರಿಗಳು ತಿಳಿಸಿದ್ದಾರೆ.

    ರಾಜ್ಯದ ದಕ್ಷಿಣ ಒಳನಾಡಿನ ಪ್ರದೇಶಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಕೋಲಾರ ಭಾಗದಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಹವಾಮಾನ ಇಲಾಖೆ ಸಹ ಮುಂದಿನ ಎರಡು ದಿನ ರಾಜ್ಯದಲ್ಲಿ ಹಗುರ ಮಳೆಯಾಗುವ ಮಾಹಿತಿಯನ್ನು ನೀಡಿದೆ. ಭಾನುವಾರ ರಾತ್ರಿಯಿಂದಲೇ ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ತುಂತುರು ಮಳೆ ಶುರುವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts