More

    ಯಾಸ್ ಚಂಡಮಾರುತ; ನಾಳೆ ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ

    ನವದೆಹಲಿ; ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

    ಸುಮಾರು ಗಂಟೆಗೆ 145 ರಿಂದ 155 ಕಿಮೀ ವೇಗದಲ್ಲಿ ಯಾಸ್ ಚಂಡಮಾರುತದ ಗಾಳಿ ಬೀಸುತ್ತಿದ್ದು,  ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಸಾಕಷ್ಟು ಹಾನಿಯುಂಟಾಗಿದೆ.

    ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು, ಭುವನೇಶ್ವರಕ್ಕೆ ತೆರಳಿ ಅಲ್ಲಿ ಮುಖ್ಯಮಂತ್ರಿ ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬಾಲಸೋರ್, ಭದ್ರಕ್ ಮತ್ತು ಪೂರ್ವ ಮೇದಿನಿಪುರದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಕೋಲ್ಕತಾ ಕ್ಕೆ ತೆರಳಿ ಅಲ್ಲಿ ಚಂಡಮಾರುತದ ಕುರಿತು ಸಭೆ ನಡೆಸಲಿದ್ದಾರೆ.

    ಚಂಡಮಾರುತದಿಂದ ಪಶ್ಚಿಮ ಬಂಗಾಳದಲ್ಲಿ ಸುಮಾರು 10 ಲಕ್ಷ ಜನ ತೊಂದರೆಗೆ ಸಿಲುಕಿಕೊಂಡಿದ್ದಾರೆ. ಸುಮಾರು ಮೂರು ಲಕ್ಷ ಮನೆಗಳು ಹಾನಿಗೊಳಗಾಗಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಹೇಳಿದ್ದಾರೆ. 15 ಲಕ್ಷ ಜನರನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ; ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ, ಆರೋಪ ಮಾಡೋದನ್ನ ಬಿಟ್ಟು ಸಹಕಾರ ಮಾಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts