ಸಿಲಿಂಡರ್ ಸ್ಫೋಟ, ಒಬ್ಬ ಸ್ಥಳದಲ್ಲೇ ಸಾವು

ಬೋರಗಾಂವ: ಸಮೀಪದ ಸದಲಗಾ ಪಟ್ಟಣದ ಪ್ರಕಾಶ ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯದ ಬೀಡ ಮೂಲದ ಸೂರ್ಯಕಾಂತ ಶೆಳಕೆ (55) ಮೃತ. ಕೂಲಿ ಕಾರ್ಮಿಕ ಜ್ಞಾನೋದಯ ಗಂಭೀರ ಗಾಯಗೊಂಡಿದ್ದು ಚಿಕ್ಕೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಆಗಮಿಸಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಪಕ್ಕದ ಮನೆಯ ಗೋಡೆಯೂ ಕುಸಿದು ಇಬ್ಬರು ಬಾಲಕಿಯರಿಗೆ ಗಾಯವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್‌ಐ ಶಿವಾನಂದ ಬಿರಾದಾರ ಭೇಟಿ ನೀಡಿ ಪರಿಶೀಲಿಸಿದರು. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…