ಸಿಲಿಂಡರ್ ಸ್ಪೋಟ, ಹಾನಿ

ವಿಜಯವಾಣಿ ಸುದ್ದಿಜಾಲ ರಾಣೆಬೆನ್ನೂರ

ಆಕಸ್ಮಿಕವಾಗಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯೊಂದು ಸುಟ್ಟು ಕರಕಲಾದ ಘಟನೆ ತಾಲೂಕಿನ ಹುಲಿಹಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ. ಹೂಲಿಹಳ್ಳಿ ಗ್ರಾಮದ ಚನ್ನಬಸಪ್ಪ ಬೆನಕನಕೊಂಡ ಎಂಬುವರ ಮನೆ ಸುಟ್ಟಿದೆ.

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕಸ್ಮಿಕವಾಗಿ ಅನಿಲ ಸೋರಿಕೆಯಾಗಿದೆ. ಇದರಿಂದ ಬೆಂಕಿ ಹತ್ತಿಕೊಂಡು ಮನೆಯಲ್ಲಿದ್ದ 1 ಲಕ್ಷ ರೂ. ನಗದು ಹಾಗೂ ಇತರ ಉಪಕರಣ ಸುಟ್ಟು ಕರಕಲಾಗಿವೆ. ಘಟನೆಯಿಂದ ಅಂದಾಜು 3 ಲಕ್ಷ ರೂ.ಗೂ ಅಧಿಕ ಹಾನಿ ಸಂಭವಿಸಿದೆ ಎಂದು ತಹಸೀಲ್ದಾರ್ ಟಿ.ಎಸ್. ಕುಲಕರ್ಣಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭೇಟಿ ನೀಡಿ ಪರಿಶೀಲಿಸಿದರು.

ಮನೆ ಮಾಲೀಕರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವ ಭರವಸೆ ನೀಡಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *