ಇಂಡಿ: ಸ್ಥಳೀಯ ನ್ಯಾಯಾಲಯದಲ್ಲಿ ಡಿ.14ರಂದು ಬೆಳಗ್ಗೆ 10.30 ರಿಂದ ಸಂಜೆ 5ರ ವರೆಗೆ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಕೋಟೆಪ್ಪ ಕಾಂಬಳೆ ಹೇಳಿದರು.
ಶುಕ್ರವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಅದಾಲತ್ ಆಯೋಜಿಸಲಾಗಿದೆ ಎಂದರು.
ದಿವಾನಿ ನ್ಯಾಯಾದೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ ಉಪಸ್ಥಿತರಿದ್ದರು.