More

  ಬಿಜೆಪಿ ಕಾರ್ಯಕರ್ತರನ್ನು ಬೆದರಿಸಲು ಕಾಂಗ್ರೆಸ್ ಸರ್ಕಾರ ತಂತ್ರ -ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ  ಮಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಲು ಬಿಜೆಪಿಯ ಅಮಾಯಕ ಕಾರ್ಯಕರ್ತರು ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ದಾಖಲು ಮಾಡುವ ಮೂಲಕ ಬೆದರಿಸುವ ತಂತ್ರ ಅನುಸರಿಸುತ್ತಿದೆ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದ್ದಾರೆ.
  ಬಿಜೆಪಿ ಯುವಮೋರ್ಚಾದ ಬೆಳ್ತಂಗಡಿ ಮಂಡಲ ಅಧ್ಯಕ್ಷರನ್ನು ವಿನಾಕಾರಣ ಬಂಧಿಸಲಾಗಿದೆ.ಪೊಲೀಸರ ದೌರ್ಜನ್ಯವನ್ನು ಪ್ರಜಾಸತ್ತಾತ್ಮಕ ಮಾದರಿಯಲ್ಲಿ ಬೆಳ್ತಂಗಡಿಯ ಶಾಸಕ ಹರೀಶ ಪೂಂಜ ಅವರು ಪ್ರಶ್ನಿಸಿದ್ದಾರೆ. ಶಾಸಕರ ಮೇಲೆಯೇ ದೂರು ದಾಖಲು
  ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರಿ ಯಂತ್ರವನ್ನು ಬಳಸಿಕೊಂಡದ್ದು ಕಾಂಗ್ರೆಸ್‌ನ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆ ಯಾಗಿದೆ. ಕಾಂಗ್ರೆಸ್ ಸರ್ಕಾರದ ಈ ಹೇಯ ಕೃತ್ಯ ಖಂಡನೀಯ ಎಂದು ಅವರು ಹೇಳಿದ್ದಾರೆ.
  ಈ ಹಿಂದೆ ಜಿಲ್ಲೆಯ ಬಿಜೆಪಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮತ್ತು ಡಾ. ವೈ.ಭರತ್ ಶೆಟ್ಟಿಯವರ ಮೇಲೆಯೂ ಸುಳ್ಳು ಎಫ್‌ಐಆರ್ ದಾಖಲಿಸುವ ಮೂಲಕ ಪೋಲಿಸ್ ಇಲಾಖೆಯನ್ನು ದುರ್ಬಳಕೆ ಮಾಡಲಾಗಿತ್ತು. ಬಿಜೆಪಿಯ ಅಮಾಯಕ
  ಕಾರ್ಯಕರ್ತರ ಹಾಗೂ ಶಾಸಕರ ಮೇಲೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಬೆಳ್ತಂಗಡಿ ಕ್ಷೇತ್ರದಲ್ಲಿ ಈಗಾಗಲೇ ಪ್ರತಿಭಟನೆ ನಡೆದಿದೆ. ಇದಕ್ಕೆ ಸರಿಯಾಗಿ ಸ್ಪಂದಿಸದೇ ಇದ್ದರೆ ಜಿಲ್ಲೆಯಾದ್ಯಂತ ತೀವ್ರವಾದ ಹೋರಾಟ ನಡೆಸಲಾಗುವುದೆಂದು ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts