20.5 C
Bangalore
Sunday, December 15, 2019

ಮತ್ತೆ ಮತ್ತೆ ಹೇಳುತ್ತಿದ್ದೇನೆ ನಾನೇನು ತಪ್ಪು ಮಾಡಿಲ್ಲ, ದ್ವೇಷದ ರಾಜಕೀಯಕ್ಕೆ ಗುರಿಯಾಗಿದ್ದೇನೆ: ಡಿಕೆಶಿ ಟ್ವೀಟ್​

Latest News

ಆನೆ ದಾಳಿಗೆ ಬೆಳೆಗಾರ ಕಂಗಾಲು

ಚಿಕ್ಕಮಗಳೂರು: ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮಿತಿಮೀರಿದೆ. ಇವುಗಳಿಂದ ಬೆಳೆಯನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ...

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಬೆಂಗಳೂರು: ಮತ್ತೆ ಮತ್ತೆ ಹೇಳುತ್ತಿದ್ದೇನೆ ನಾನೇನು ತಪ್ಪು ಮಾಡಿಲ್ಲ. ದ್ವೇಷದ ರಾಜಕೀಯದಲ್ಲಿ ನಾನು ಗುರಿಯಾಗಿದ್ದೇನೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಡಿ.ಕೆ.ಶಿವಕುಮಾರ್​ ಅವರ ಅಧಿಕೃತ ಟ್ವಿಟರ್​ ಖಾತೆಯಿಂದ ಎರಡು ಟ್ವೀಟ್​ ಪೋಸ್ಟ್​ ಮಾಡಲಾಗಿದ್ದು, ಮೊದಲ ಟ್ವೀಟ್​​ನಲ್ಲಿ ನನಗೆ ಬೆಂಬಲ ನೀಡಿ ನಾಳೆ ಬೆಂಗಳೂರಿನಲ್ಲಿ ಬೃಹತ್​ ಪ್ರತಿಭಟನೆ ಕೈಗೊಂಡಿರುವ ನನ್ನ ನಾಯಕರು, ಬೆಂಬಲಿಗರು, ಹಿತೈಷಿಗಳು ಮತ್ತು ಸ್ನೇಹಿತರಿಗೆ ನನ್ನ ಹೃದಯ ಪೂರ್ವಕ ಧನ್ಯವಾದಗಳು. ಆದರೆ, ನನ್ನದೊಂದು ವಿನಯಪೂರ್ವಕ ಮನವಿ ಏನೆಂದರೆ, ಪ್ರತಿಭಟನೆ ಶಾಂತಿದಾಯಕವಾಗಿರಲಿ, ನಾಗರಿಕರ ಮೇಲೆ ಯಾವುದೇ ಪರಿಣಾಮ ಬೀರದಿರಲಿ ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಬೇಡಿ ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ಉತ್ತಮ ಬೆಂಬಲ ಹಾಗೂ ಆಶೀರ್ವಾದಗಳೆಲ್ಲವನ್ನು ನಾನು ನಿಮ್ಮಿಂದ ಸ್ವೀಕರಿಸಿದ್ದೇನೆ. ದೇವರು ಮತ್ತು ಕಾನೂನಿನ ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ರಾಜಕೀಯವಾಗಿ ಮತ್ತು ಕಾನೂನಾತ್ಮಕವಾಗಿ ವಿಜಯೋತ್ಸವದೊಂದಿಗೆ ಹೊರಹೊಮ್ಮುತ್ತೇನೆ ಎಂಬ ಬಲವಾದ ನಂಬಿಕೆ ನನ್ನಲ್ಲಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯ ಅಕ್ರಮ ಹಣ ವರ್ಗಾವಣೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಡಿಕೆಶಿ, ವಿಚಾರಣೆಯನ್ನು ಎದುರಿಸುತ್ತಿದ್ದಾರೆ. ಇಡಿ ವಿಶೇಷ ನ್ಯಾಯಾಲಯ 10 ದಿನಗಳ ವಿಚಾರಣೆಗಾಗಿ ಡಿಕೆಶಿ ಅವರನ್ನು ಇಡಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. (ದಿಗ್ವಿಜಯ ನ್ಯೂಸ್​)

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...